Friday, 22nd November 2024

ಮೊರ್ಬಿ ಸೇತುವೆ ಕುಸಿತ: ಇಂದು ವಿಚಾರಣೆ

ವದೆಹಲಿ: ಗುಜರಾತ್‌ನ ಮೊರ್ಬಿ ಸೇತುವೆ ಕುಸಿತದ ಘಟನೆಯ ತನಿಖೆಗೆ ನ್ಯಾಯಾಂಗ ಆಯೋಗ ರಚಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮ ವಾರ ವಿಚಾರಣೆ ನಡೆಸಲಿದೆ.

ವಕೀಲ ವಿಶಾಲ್ ತಿವಾರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ವಿಚಾರಣೆ ನಡೆಸಲಿದೆ.

ಈ ಘಟನೆಯು ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಸಂಪೂರ್ಣ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ವಕೀಲ ವಿಶಾಲ್ ತಿವಾರಿ ಕಳೆದ ನವೆಂಬರ್ 1ರಂದು ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಒತ್ತಾಯಿಸಿದ್ದರು. ಸುಪ್ರೀಂಕೋರ್ಟ್ ಶೀಘ್ರದಲ್ಲೇ ವಿಚಾರಣೆ ನಡೆಸುವುದಾಗಿ ಹೇಳಿತ್ತು.

ಅಕ್ಟೋಬರ್ 30ರಂದು ಗುಜರಾತ್‌ನ ಮೊರ್ಬಿ ನಗರದಲ್ಲಿ ಮಚ್ಚು ನದಿಗೆ ಕಟ್ಟಲಾದ ಬ್ರಿಟಿಷರ ಕಾಲದ ಕೇಬಲ್ ಸೇತುವೆ ಕುಸಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 134ಕ್ಕೂ ಜನರು ಮೃತಪಟ್ಟಿದ್ದರು.