Friday, 13th December 2024

ಸಲಿಂಗಿ ವಿವಾಹಗಳಿಗೆ ಕಾನೂನು ಮಾನ್ಯತೆ: ನಾಳೆ ವಿಚಾರಣೆ

ವದೆಹಲಿ: ಸಲಿಂಗಿ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸೋಮವಾರ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಪರಿಗಣಿಸುವ ಸಾಧ್ಯತೆ ಇದೆ.

ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿರುವ ಪಟ್ಟಿ ಪ್ರಕಾರ, ಈ ಅರ್ಜಿಗಳು ಸಿಜೆಐ ಡಿ.ವೈ.ಚಂದ್ರಚೂಡ್‌, ನ್ಯಾ.ಪಿ.ಎಸ್‌.ನರಸಿಂಹ ಮತ್ತು ನ್ಯಾ.ಜೆ.ಬಿ.ಪರ್ದಿವಾಲ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಲಿವೆ.

ಜ.6ರಂದು ಸುಪ್ರೀಂ ಕೋರ್ಟ್‌ ಸಲಿಂಗಿ ವಿವಾಹಕ್ಕೆ ಸಂಬಂಧಿಸಿ ದೆಹಲಿ ಹೈಕೋರ್ಟ್‌ ಸೇರಿದಂತೆ ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ಇತ್ಯರ್ಥಕ್ಕೆ ಬಾಕಿ ಯಿರುವ ಎಲ್ಲ ಅರ್ಜಿಗಳನ್ನೂ ಒಟ್ಟುಗೂಡಿಸಿ, ತನಗೆ ವರ್ಗಾಯಿಸಿಕೊಂಡಿತ್ತು.