Wednesday, 11th December 2024

ಸುಪ್ರೀಂ ನ್ಯಾಯಮೂರ್ತಿ ಎಂ.ಆರ್.ಶಾಗೆ ಹೃದಯಾಘಾತ

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಂ.ಆರ್.ಶಾ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆಗಾಗಿ ದೆಹಲಿಗೆ ಕರೆದೊಯ್ಯ ಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕೋರ್ಟ್ ಅಧಿಕಾರಿಗಳು ಗೃಹ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಏರ್ ಆಂಬ್ಯು ಲೆನ್ಸ್ ಮೂಲಕ ದೆಹಲಿಗೆ ಕರೆತರುತ್ತಿದ್ದಾರೆ.

ಇನ್ನೂ ನ್ಯಾಯಮೂರ್ತಿ ಎಂ.ಆರ್.ಶಾ ಅವರು ಗುರುವಾರ ಹೃದಯಾಘಾತಕ್ಕೆ ಒಳಗಾಗಿದ್ದ ಕಾರಣ, ಹಿಮಾಚಲ ಪ್ರದೇಶದಿಂದ ಏರ್ ಆಂಬ್ಯುಲೆನ್ಸ್ ನಲ್ಲಿ ರಾಷ್ಟ್ರ ರಾಜಧಾನಿಗೆ ಸಾಗಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಶಾ ಅವರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.