Friday, 25th October 2024

ಉತ್ತರಭಾರತದ ರಾಜ್ಯಗಳಲ್ಲಿ ಉಷ್ಣಮಾರುತ: 143 ಜನ ಬಲಿ, 41,789 ಕಾಯಿಲೆಗೆ ತುತ್ತು

ವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಅನೇಕ ಉತ್ತರಭಾರತದ ರಾಜ್ಯಗಳಲ್ಲಿ ಉಷ್ಣಮಾರುತವು ಮಾರಣಾಂತಿಕವಾಗಿ ಪರಿಣಮಿಸಿದ್ದು, ಇದುವರೆಗೆ ದೇಶಾದ್ಯಂತ 143 ಜನ ಬಲಿಯಾಗಿದ್ದಾರೆ. ಇನ್ನು ದೇಶಾದ್ಯಂತ ಸುಮಾರು 41,789 ಉಷ್ಣ ಸಂಬಂಧಿ ಕಾಯಿಲೆಗೆ ತುತ್ತಾಗಿ ದ್ದಾರೆ. ಈ ಬಗ್ಗೆ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ಮಾಹಿತಿ ನೀಡಿದೆ.

ಮಾ. 1 ಮತ್ತು ಜೂ. 20ರ ನಡುವೆ ಉಷ್ಣ ಮಾರುತಕ್ಕೆ ಬರೋಬ್ಬರಿ 143 ಬಲಿಯಾಗಿದ್ದಾರೆ. ಉತ್ತರಪ್ರದೇಶದಲ್ಲಿ ಅತಿ ಹೆಚ್ಚು ಜನ ಉಷ್ಣ ಮಾರುತಕ್ಕೆ ಬಲಿಯಾಗಿದ್ದು, ಸಾವಿನ ಸಂಖ್ಯೆ 35ಕ್ಕೆ ಏರಿಕೆ ಆಗಿದೆ. ಇನ್ನು ದೆಹಲಿಯಲ್ಲಿ 21 ಮತ್ತು ಬಿಹಾರ ಹಾಗೂ ರಾಜಸ್ಥಾನಗಳಲ್ಲಿ ತಲಾ 17 ಮಂದಿ ಬಲಿಯಾಗಿ ದ್ದಾರೆ.

ಹೀಟ್‌ಸ್ಟ್ರೋಕ್‌ನಿಂದಾಗಿ ಹೆಚ್ಚಿನ ಆಸ್ಪತ್ರೆ ಸೇರುತ್ತಿದ್ದು, ಎರಡೇ ದಿನಗಳಲ್ಲಿ 20 ಮಂದಿ ಮೃತಪಟ್ಟಿದ್ದಾರೆ.

ಎರಡು ದಿನಗಳಲ್ಲಿಯೇ ರಾಮ್‌ ಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಸಫ್ದರ್‌ಜಂಗ್‌ ಆಸ್ಪತ್ರೆಯಲ್ಲಿ 9, ಲೋಕ ನಾಯಕ ಆಸ್ಪತ್ರೆಯಲ್ಲಿ ಒಂದು ವಾರದಲ್ಲಿ ಇಬ್ಬರು ಸೇರಿ ಒಟ್ಟು 20 ಮಂದಿ ಮೃತಪಟ್ಟಿದ್ದಾರೆ. ರಾಮ್‌ ಮನೋಹರ ಲೋಹಿಯಾ ಆಸ್ಪತ್ರೆಯಲ್ಲಿಯೇ ಉಷ್ಣ ಸಂಬಂಧಿ ಕಾಯಿಲೆಗೆ ತುತ್ತಾಗಿರುವ 45 ರೋಗಿಗಳು ಚಿಕಿತ್ಸೆ ಪಡೆಯು ತ್ತಿದ್ದಾರೆ.

ದೆಹಲಿಯಲ್ಲಿ ಉಷ್ಣ ಗಾಳಿಯಿಂದಾಗಿ 20 ಜನ ಮೃತಪಟ್ಟಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಆಸ್ಪತ್ರೆಗಳಿಗೆ ಹಲವು ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರು ಕೂಡ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಸೂಚನೆ ನೀಡಿದ್ದಾರೆ.