ತಮಿಳುನಾಡು ಮತ್ತು ಆಂಧ್ರಪ್ರದೇಶದ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ಶುಕ್ರವಾರ ಆಂಧ್ರ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿದೆ. ಚೆಯ್ಯುರು ನದಿ ಉಕ್ಕಿ ಹರಿದ ಪರಿಣಾಮ ಹಲವಾರು ಹಳ್ಳಿಗಳು ಜಲಾವೃತಗೊಂಡಿದೆ.
ದಕ್ಷಿಣ ಕರಾವಳಿ ಮತ್ತು ರಾಯಲಸೀಮಾ ಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ನೆಚ್ಚರಿಕೆ ನೀಡಿತ್ತು. ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ಸಾವಿರಾರು ಭಕ್ತರು ಪರ ದಾಡುವಂತಾಗಿದೆ. ತಿರುಮಲ ಬೆಟ್ಟದಲ್ಲಿರುವ ದೇವಸ್ಥಾನದ ನಾಲ್ಕು ರಸ್ತೆಗಳು ಪ್ರವಾಹದಿಂದ ಆವೃತ್ತವಾಗಿದೆ.