ಹೈದ್ರಾಬಾದ್ : ಅಕ್ಟೋಬರ್ 17ರಂದು ಸುರಿದ ಭಾರೀ ಮಳೆಯಿಂದಾಗಿ ಕಳೆದ 24 ಗಂಟೆಯಲ್ಲಿ ಆರು ಜನರು ಮೃತಪಟ್ಟು, 37 ಸಾವಿರ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ.
ಹೈದರಾಬಾದ್ ನಲ್ಲಿ ಸುರಿದ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ 37,000 ಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಶನಿವಾರ ರಾತ್ರಿ ಸುರಿದ ಮಳೆಗೆ ನಗರದಲ್ಲಿ ಮತ್ತೆ 6 ಮಂದಿ ಮೃತಪಟ್ಟಿದ್ದಾರೆ.
ಅಕ್ಟೋಬರ್ 13ರಂದು ಸುರಿದ ಭಾರಿ ಮಳೆಯಿಂದಾಗಿ ವಿವಿಧ ಪ್ರದೇಶಗಳು ಜಲಾವೃತಗೊಂಡಿದ್ದು, 35,309 ಕುಟುಂಬಗಳು ಸಂಕಷ್ಟಕ್ಕೆ ತುತ್ತಾಗಿವೆ ಎಂದು ಜಿಎಚ್ ಎಂಸಿ ಆಯುಕ್ತ ಲೋಕೇಶ್ ಕುಮಾರ್ ತಿಳಿಸಿದ್ದಾರೆ. ಅಕ್ಟೋಬರ್ 17ರಂದು 2,100 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು.
ಮುಂದಿನ ಎರಡು ದಿನಗಳಲ್ಲಿ ಹೆಚ್ಚಿನ ಮಳೆ ಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಎಚ್ ಎಂಸಿ ತಗ್ಗು ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸುತ್ತಿದೆ. ಭಾನುವಾರದವರೆಗೆ ರಾಜ್ಯದಲ್ಲಿ 61 ಪ್ರವಾಹ ಸಂಬಂಧಿ ಸಾವುಗಳು ವರದಿಯಾಗಿದೆ.