Friday, 13th December 2024

ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ: 15 ಜನರ ಸಾವು

ವದೆಹಲಿ: ಕರಾವಳಿ ರಾಜ್ಯದಲ್ಲಿ ಭಾರಿ ಮಳೆ ಮುಂದುವರಿದಿದ್ದರಿಂದ ಗುಜರಾತಿನ ವಿವಿಧ ಜಿಲ್ಲೆಗಳಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿ, 23,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 300ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆಯನ್ನು ಹೆಚ್ಚಿಸಲು ಗುಜರಾತ್ ಸರ್ಕಾರವು ದ್ವಾರಕಾ, ಆನಂದ್, ವಡೋದರಾ, ಖೇಡಾ, ಮೊರ್ಬಿ ಮತ್ತು ರಾಜ್ಕೋಟ್ ಜಿಲ್ಲೆ ಗಳಲ್ಲಿ ತಲಾ ಒಂದು ಸೇನಾ ತುಕಡಿಗಳನ್ನು ಕೋರಿದೆ.

ವಿಪತ್ತು ನಿರ್ವಹಣಾ ಪ್ರಯತ್ನಗಳನ್ನು ಬೆಂಬಲಿಸಲು 14 ಎನ್ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ) ತುಕಡಿಗಳು ಮತ್ತು ಎಸ್ಡಿಆರ್‌ಎಫ್ನ 22 ತುಕಡಿಗಳನ್ನು ಈಗಾಗಲೇ ನಿಯೋಜಿಸಲಾಗಿದೆ.

ಭಾರೀ ಮಳೆಯಿಂದಾಗಿ ಉಕ್ಕಿ ಹರಿಯುವ ನದಿಗಳು, ಚರಂಡಿಗಳು ಮತ್ತು ಸರೋವರಗಳಿಗೆ ಯಾರೂ ಹೋಗದಂತೆ ಪೊಲೀಸರ ಸಹಾಯ ತೆಗೆದು ಕೊಳ್ಳುವ ಮೂಲಕ ಸಂಪೂರ್ಣ ಜಾಗರೂಕತೆ ಮತ್ತು ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಇದಲ್ಲದೆ, ಮೀನುಗಾರರು ಮೀನುಗಾರಿಕೆಗೆ ಹೋಗದಂತೆ ಎಚ್ಚರಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹವಾಮಾನ ಇಲಾಖೆ ವಿಶೇಷವಾಗಿ ಕರಾವಳಿ ಪ್ರದೇಶಗಳ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದೆ