Monday, 14th October 2024

ಕನ್ನಡದಲ್ಲೇ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಾ.ವೀರೇಂದ್ರ ಹೆಗ್ಡೆ

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಅವರು ಗುರುವಾರ ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ, ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.

ಧರ್ಮಾಧಿಕಾರಿ ರತ್ನವರ್ಮ ಹೆಗ್ಗಡೆ ಮತ್ತು ರತ್ನಮ್ಮ ಹೆಗ್ಗಡೆ ದಂಪತಿಯ ಹಿರಿಯ ಪುತ್ರ ವೀರೇಂದ್ರ ಹೆಗ್ಡೆ ಅವರು ನವೆಂಬರ್ 23, 1948 ರಂದು ಜನಿಸಿದರು. ಅವರು ತುಳು ಪರಂಪರೆಯ ಪೆರ್ಗಡೆ ರಾಜವಂಶದಿಂದ ಬಂದವರು.