Thursday, 12th December 2024

ಉಪಚುನಾವಣೆ: ಕಣಕ್ಕಿಳಿದ ಹೇಮಂತ್‌ ಸೊರೇನ್‌ ಪತ್ನಿ

ರಾಂಚಿ: ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಪತ್ನಿ ಕಲ್ಪನಾ ಗಾಂಡೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಮ್‌ಎಮ್‌) ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷ ಘೋಷಿಸಿದೆ.

ಗಿರಿದಿಹ್ ಜಿಲ್ಲೆಯಲ್ಲಿರುವ ಈ ಸ್ಥಾನವು ಜೆಎಂಎಂ ಶಾಸಕ ಸರ್ಫರಾಜ್ ಅಹ್ಮದ್ ಅವರ ರಾಜೀನಾಮೆಯಿಂದಾಗಿ ತೆರವಾಗಿತ್ತು.

ಗಾಂಡೆಯ ವಿಧಾನಸಭಾ ಕ್ಷೇತ್ರಕ್ಕೆ ಮೇ 20 ರಂದು ಉಪಚುನಾವಣೆ ನಡೆಯಲಿದೆ.

ಎಂಟೆಕ್‌ ಮತ್ತು ಎಂಬಿಎ ಪದವಿದರೆಯಾಗಿರುವ ಕಲ್ಪನಾ ಅವರ ರಾಜಕೀಯ ಪಯಣ ಮಾರ್ಚ್‌ 4ರಂದು ನಡೆದ ಜೆಎಂಎಂ ಪಕ್ಷದ ಸ್ಥಾಪನಾ ದಿನದ ಕಾರ್ಯಕ್ರಮದಂದು ಆರಂಭವಾಯಿತು. ಈ ವೇಳೆ ಮಾತನಾಡಿದ್ದ ಅವರು, ‘2019 ರಲ್ಲಿ ಹೇಮಂತ್ ಸೋರೆನ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವಿರೋಧಿಗಳು ಸಂಚು ರೂಪಿಸಿ ನನ್ನ ಪತಿಯನ್ನು ಕಂಬಿ ಹಿಂದೆ ಕಳುಹಿಸಿದ್ದಾರೆ. ಅವರಿಗೆ ತಕ್ಕ ಉತ್ತರ ನೀಡುತ್ತೇನೆ’ ಎಂದು ಹೇಳಿದ್ದರು.