ನವದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಿರುವ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರದ ಗಡಿಗಳಲ್ಲಿ ಹೈ ಅಲರ್ಟ್ ಘೋಷಿಸಿ ದ್ದಾರೆ.
ಭಾರತ-ಪಾಕಿಸ್ತಾನದ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಅಂತರ್ರಾಷ್ಟ್ರೀಯ ಗಡಿಯಲ್ಲಿ ಹೆಚ್ಚುವರಿ ಭದ್ರತಾ ಪಡೆಯನ್ನು ನಿಯೋಜಿಸ ಲಾಗಿದೆ. ಬಿಎಸ್‌ಎಫ್‌ನ ಜಮ್ಮು ಪ್ರಾಂತ್ಯದ ಐಜಿ ಡಿ.ಕೆ. ಬೂರಾ, ಎಲ್ಒಸಿಯಲ್ಲಿ ಡ್ರೋನ್ ಹಾರಾಟದ ಮೇಲೆ ನಿಗಾ ವಹಿಸುವುದು ಸೇರಿದಂತೆ ವಿವಿಧ ಕಾರ್ಯಾಚರಣೆಗೆ ಬಿಎಸ್‌ಎಫ್ ಸನ್ನದ್ಧವಾಗಿದೆ ಎಂದು ಹೇಳಿದ್ದಾರೆ.