Friday, 22nd November 2024

ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ ಹೈ ಅಲರ್ಟ್

ಮುಂಬೈ: ಉತ್ತರಾಖಂಡದಿಂದ ದಕ್ಷಿಣದ ತೆಲಂಗಾಣ ರಾಜ್ಯಕ್ಕೆ ಮುಂಗಾರು ಮಾರುತಗಳು ಅಬ್ಬರಿಸುತ್ತಿವೆ. ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸ ಲಾಗಿದೆ.

ತೆಲಂಗಾಣ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಿಗೆ ರೆಡ್ ಅಲರ್ಟ್, ಕೇರಳದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಲವಾರು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಗುಜರಾತ್‌ನಲ್ಲಿ 3,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ದಕ್ಷಿಣ ಗುಜರಾತ್‌ನ ಛೋಟೌದೈಪುರದಲ್ಲಿ 400, ನವಸಾರಿಯಲ್ಲಿ 550 ಮತ್ತು ವಲ್ಸಾದ್‌ನಲ್ಲಿ 470 ಸೇರಿದಂತೆ ಗುಜರಾತ್‌ನಲ್ಲಿ ಒಟ್ಟು 3,250 ಜನರನ್ನು ಸ್ಥಳಾಂತರಿಸಲಾಗಿದೆ. ಹೆಚ್ಚಿನ ಜನರ ಸ್ಥಳಾಂತರಕ್ಕೆ ಸಿದ್ಧರಾಗುವಂತೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ 13 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಮತ್ತು 16 ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಅನ್ನು ನಿಯೋಜಿಸಲಾಗಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಎಸ್‌ಡಿಆರ್‌ಎಫ್‌ನ ಒಂದು ತುಕಡಿ ವಡೋದ್ರಾದಿಂದ ಛೋಟೌದೈಪುರಕ್ಕೆ ತೆರಳಿದೆ.

ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯ ದಂತೆ ಸೂಚಿಸಲಾಗಿದೆ.