Saturday, 5th October 2024

ಹಿಜಾಬ್: ವಾರದಲ್ಲೇ ತೀರ್ಪು ಪ್ರಕಟ ಸಾಧ್ಯತೆ..!

ವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧ ತೆಗೆದು ಹಾಕಲು ನಿರಾ ಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಈ ವಾರ ಪ್ರಕಟಿಸುವ ಸಾಧ್ಯತೆಯಿದೆ.

ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಸೆಪ್ಟೆಂಬರ್ 22 ರಂದು 10 ದಿನಗಳ ಕಾಲ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಅರ್ಜಿಗಳ ಮೇಲಿನ ತನ್ನ ತೀರ್ಪನ್ನು ಕಾಯ್ದಿರಿಸಿದೆ. ನ್ಯಾಯಪೀಠದ ಮುಖ್ಯಸ್ಥ ನ್ಯಾಯಮೂರ್ತಿ ಗುಪ್ತಾ ಅವರು ಅ.16ರಂದು ನಿವೃತ್ತರಾಗಲಿರುವುದರಿಂದ ಈ ಅರ್ಜಿಗಳ ಬಗ್ಗೆ ಈ ವಾರ ತೀರ್ಪು ಹೊರಬೀಳುವ ನಿರೀಕ್ಷೆಯಿದೆ.

ಶಾಲಾ ಕಾಲೇಜುಗಳಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವಂತಹ ಬಟ್ಟೆಗಳನ್ನು ಧರಿಸುವು ದನ್ನು ನಿಷೇಧಿಸಿದ ರಾಜ್ಯ ಸರ್ಕಾರದ ಫೆಬ್ರವರಿ 5, 2022 ರ ಆದೇಶ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಅರ್ಜಿದಾರರ ಪರ ವಕೀಲರು ವಾದಿಸಿದ್ದರು.