Thursday, 12th December 2024

ಶಾಲೆಯ ಒಳಗೆ ಹಿಜಾಬ್‌ ಬ್ಯಾನ್‌ ಮುಂದುವರಿಯಲಿದೆ: ಬಿ.ಸಿ ನಾಗೇಶ್‌

ವದೆಹಲಿ : ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ವಿಭಿನ್ನ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಪ್ರತಿಕ್ರಿಯಿಸಿದ್ದಾರೆ

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಹಿಜಾಬ್‌ ತೀರ್ಪು ವಿವಾದದ ಸುಪ್ರೀಂಕೋರ್ಟ್ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಸದ್ಯಕ್ಕೆ ಶಾಲೆ ಯಲ್ಲಿ ಮಕ್ಕಳು ಹಿಜಾಬ್‌ ಧರಿಸಲು ಅವಕಾಶ ಇಲ್ಲವೇ ಇಲ್ಲ. ಶಾಲೆಯ ಒಳಗೆ ಹಿಜಾಬ್‌ ಬ್ಯಾನ್‌ ಮುಂದುವರಿಯಲಿದೆ. ಮುಂದಿನ ತೀರ್ಪು ಬರುವವರೆಗೆ ಹೈರ್ಕೋರ್ಟ್‌ ಆದೇಶ ಮುಂದುವರೆಯಲಿದೆ ಎಂದಿದ್ದಾರೆ.

ನ್ಯಾಹೇಮಂತ್‌ ಗುಪ್ತಾ, ನ್ಯಾ ಸುಧಾಂಶು ಧುಲಿಯಾ ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದಾರೆ. ಮುಸ್ಲಿಂ ವಿದ್ಯಾರ್ಥಿ ಯರ ಮೇಲ್ಮನವಿ ವಜಾ ಮಾಡಲಾಗಿದೆ ಎಂದು ನ್ಯಾಯ ಮೂರ್ತಿ ಹೇಮಂತ್‌ ಗುಪ್ತಾ ಆದೇಶ ಹೊರಡಿಸಿದ್ದಾರೆ. ನ್ಯಾ ಸುಧಾಂಶು ಧುಲಿಯಾ ಹೈಕೋರ್ಟ್‌ ತೀರ್ಪು ರದ್ದುಗೊಳಿಸಿದ್ದಾರೆ. ಹೀಗಾಗಿ ಹಿಜಾಬ್‌ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಸದ್ಯಕ್ಕೆ ಹಿಜಾಬ್‌ ಧರಿಸಿ ಬರುವ ಹಾಗಿಲ್ಲ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಕೇಸ್ ವರ್ಗಾವಣೆ ಮಾಡಲಾಗಿದೆ.