Sunday, 15th December 2024

ಧರ್ಮನಿಷ್ಠ ಮುಸಲ್ಮಾನರಿಗೆ ಹಿಜಾಬ್ ಆರಾಧನೆ ಕ್ರಿಯೆಯಾಗಿದೆ: ಒವೈಸಿ

#AsaduddinOwaisi

ಹೈದರಾಬಾದ್:‌ ಹಿಜಾಬ್ ನಿಷೇಧ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್‌ ನೀಡಿರುವ ತೀರ್ಪನ್ನು ತಾನು ಒಪ್ಪುವುದಿಲ್ಲ ಎಂದು ಎಐಎಮ್‌ಐಎಂ ಸಂಸದ ಅಸಾದುದ್ದೀನ್‌ ಒವೈಸಿ ಹೇಳಿದ್ದಾರೆ.

ತೀರ್ಪು ಹೊರಬರುತ್ತಿದ್ದಂತೆ ಸರಣಿ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ ಉವೈಸಿ, ʼಹಿಜಾಬ್‌ ಕುರಿತಾದ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಒಪ್ಪುವುದಿಲ್ಲ. ತೀರ್ಪನ್ನು ಒಪ್ಪದಿರು ವುದು ನನ್ನ ಹಕ್ಕು ಹಾಗೂ ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೊರೆ ಹೋಗ ಲಿದ್ದಾರೆ ಎಂದು ನಾನು ಭಾವಿಸುತ್ತೇನೆʼ ಎಂದು ಹೇಳಿದ್ದಾರೆ.

ʼಧರ್ಮ, ಸಂಸ್ಕೃತಿ, ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿರು ವುದರಿಂದ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ಮಾತ್ರವಲ್ಲದೆ ಇತರ ಧಾರ್ಮಿಕ ಗುಂಪುಗಳ ಸಂಘಟನೆಗಳು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುತ್ತವೆ ಎಂದು ನಾನು ಭಾವಿಸುತ್ತೇನೆʼ ಎಂದವರು ತಿಳಿಸಿ ದ್ದಾರೆ.

ʼಓರ್ವರಿಗೆ ಆಲೋಚನೆ, ಅಭಿವ್ಯಕ್ತಿ, ಧಾರ್ಮಿಕ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವಿದೆ ಎಂದು ಸಂವಿಧಾನದ ಪೀಠಿಕೆಯು ಹೇಳುತ್ತದೆ. ನನ್ನ ತಲೆಯನ್ನು ಮುಚ್ಚಿಕೊಳ್ಳುವುದು ಅತ್ಯಗತ್ಯ ಎಂಬುದು ನನ್ನ ನಂಬಿಕೆ ಮತ್ತು ವಿಶ್ವಾಸವಾಗಿದ್ದರೆ, ನಾನು ಸೂಕ್ತವೆಂದು ಭಾವಿಸಿದಂತೆ ಅದನ್ನು ವ್ಯಕ್ತಪಡಿಸಲು ನನಗೆ ಹಕ್ಕಿದೆ. ಧರ್ಮನಿಷ್ಠ ಮುಸಲ್ಮಾನರಿಗೆ ಹಿಜಾಬ್ ಕೂಡ ಒಂದು ಆರಾಧನೆಯ ಕ್ರಿಯೆಯಾಗಿದೆ.ʼ