Sunday, 15th December 2024

ಹಿಜಾಬ್ ವಿವಾದ: ನಾಳೆ ತೀರ್ಪು ಪ್ರಕಟ ?

ವದೆಹಲಿ: ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ನಾಳೆ ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

ಪ್ರಕರಣದ ಸಂಬಂಧ ಹಿಜಾಬ್ ವಿವಾದದ ಬಗ್ಗೆ ಸುದೀರ್ಘವಾಗಿ ವಾದ , ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ಗುರುವಾರ ಬೆಳಗ್ಗೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನಾಳೆ ಅಂತಿಮ ತೀರ್ಪು ಪ್ರಕಟಿಸಲಿದೆ.

ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ನಿವೃತ್ತರಾಗುವ ಮೊದಲು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಉಡುಪಿಯಲ್ಲಿ ಆರಂಭವಾಗಿ ನಂತರ ರಾಜ್ಯಾದ್ಯಂತ ಸಂಘರ್ಷ ಸೃಷ್ಟಿಸಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂ ಕೋರ್ಟಿನಲ್ಲಿ ನಡೆಯುತ್ತಿದೆ. ಉಡುಪಿಯ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಆರು ವಿದ್ಯಾರ್ಥಿನಿಯರು ಹಿಜಾಬ್‌ಗೆ ತರಗತಿಯಲ್ಲಿ ನಿರ್ಬಂಧ ವಿಧಿಸಿದ ಕಾಲೇಜಿನ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಚ್‌ ಮೊರೆ ಹೋಗಿದ್ದರು.