Saturday, 23rd November 2024

ಸ್ವಯಂ ಘೋಷಿತ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡನ ಹತ್ಯೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರಿನಲ್ಲಿ ಸ್ವಯಂ ಘೋಷಿತ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ನನ್ನು ಹತ್ಯೆ ಮಾಡಲಾಗಿದ್ದು, ಮೂವರು ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್, ನಿಷೇಧಿತ ಉಗ್ರ ಸಂಘಟನೆಯ ಭಯೋತ್ಪಾದಕ ಕಮಾಂಡರ್ ಎಚ್.ಎಂ.ನಿಸಾರ್ ಖಾಂಡೆ ಅವರನ್ನು ಹತ್ಯೆ ಮಾಡಲಾಗಿದೆ. 01 ಎಕೆ 47 ರೈಫಲ್ ಸೇರಿದಂತೆ ಮದ್ದುಗುಂಡು ಗಳನ್ನು ವಶಪಡಿಸಿಕೊಳ್ಳಲಾಗಿದೆ.

‘ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಶ್ರೀನಗರದ 92 ಬೇಸ್ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ವಕ್ತಾರರು ಉಲ್ಲೇಖಿಸಿದ್ದಾರೆ.