Sunday, 15th December 2024

ಹಿ.ಪ್ರದೇಶ ಸಿಎಂ ಜೈರಾಂ ಠಾಕೂರ್‌’ಗೂ ಕೊರೋನಾ ಪಾಸಿಟಿವ್

ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಇಂದು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಗಾದಂತ ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ತಾವು ಹೋಂ ಕ್ವಾರಂಟೈನ್ ನಲ್ಲಿ ಚಿಕಿತ್ಸೆ ಪಡೆಯ ಲಿದ್ದೇನೆ. ತನ್ನ ಸಂಬಂಧಕ್ಕೆ ಬಂದಂತ ಯಾರಿಗಾದರೂ ಕೊರೋನಾ ಲಕ್ಷಣಗಳಿದ್ದರೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.