Friday, 13th December 2024

ಭಾರಿ ಮಳೆ: ಹಿ.ಪ್ರದೇಶದ ಶಾಲಾ ಕಾಲೇಜುಗಳಿಗೆ ಜು.11 ರವರೆಗೆ ರಜೆ

ಹಿಮಾಚಲ ಪ್ರದೇಶ: ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ 11 ರವರೆಗೆ ಹಿಮಾಚಲ ಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಜುಲೈ 10 ಮತ್ತು 11 ರಂದು ರಾಜ್ಯದ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ರಜೆ ಘೋಷಿಸಿದ್ದಾರೆ. ಈ ಸಂಬಂಧ ಉನ್ನತ ಶಿಕ್ಷಣ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ಜು.10 ಸೋಮವಾರದಂದು ಎಲ್ಲಾ ಶಿಕ್ಷಣ ಸಂಸ್ಥೆ ಗಳಿಗೆ ರಜೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕುಲು ಅಶುತೋಷ್ ಗರ್ಗ್ ಅವರು ತಿಳಿಸಿದ್ದಾರೆ.

ಕಳೆದ ಶನಿವಾರ ಬೆಳಗ್ಗೆಯಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರಿಂದಾಗಿ ಬಹುತೇಕ ಸಂಪರ್ಕ ರಸ್ತೆಗಳು ಬಂದ್ ಆಗಿದ್ದು, ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಕೂಡ ನೀಡಲಾಗಿದೆ ಎಂದರು.