Saturday, 14th December 2024

ಕಾಂಗ್ರೆಸ್ ಪ್ರಣಾಳಿಕೆ ಪಾಕಿಸ್ತಾನದ ಹಿತಾಸಕ್ತಿಗಳೊಂದಿಗೆ ಹೆಚ್ಚು ಹೊಂದಿಕೆಯಾಗುತ್ತಿದೆ: ಹಿಮಂತ ಬಿಸ್ವಾ ಶರ್ಮಾ

ಸ್ಸಾಂ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಟೀಕಿಸಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷ ಪಾಕಿಸ್ತಾನದಲ್ಲಿ ಚುನಾವಣೆ ಗೆಲ್ಲುವ ತಯಾರಿ ಮಾಡಿದಂತಿದೆ. ರಾಹುಲ್ ಗಾಂಧಿ ಅವರು ಪ್ರಧಾನಿ ಅಭ್ಯರ್ಥಿಯಾಗಲು ಸೂಕ್ತವೇ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆ ಭಾರತಕ್ಕಿಂತ ಪಾಕಿಸ್ತಾನದ ಹಿತಾಸಕ್ತಿಗಳೊಂದಿಗೆ ಹೆಚ್ಚು ಹೊಂದಿಕೆಯಾಗಿದೆ. ಕಾಂಗ್ರೆಸ್ ಪಕ್ಷವು ಪಾಕಿಸ್ತಾನದಲ್ಲಿ ಚುನಾವಣೆ ಗೆಲ್ಲುವ ರೀತಿಯಲ್ಲಿ ಸಿದ್ಧವಾಗಿದೆ. ನಾವು ಪ್ರಣಾಳಿಕೆಯನ್ನು ಓದಿದ್ದೇವೆ ಮತ್ತು ಓದಿದ ಅನಂತರ ಈ ಪ್ರಣಾಳಿಕೆಯು ಪಾಕಿಸ್ತಾನಕ್ಕೆ ಹೆಚ್ಚು ಮತ್ತು ಭಾರತಕ್ಕೆ ಕಡಿಮೆ ಎಂದು ತೀರ್ಮಾನಿಸಿದೆವು ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷವು ಸಾಮಾನ್ಯ ಜನರ ಸಂಪನ್ಮೂಲಗಳನ್ನು ಕಸಿದುಕೊಂಡು ದೇಶದ ಆರ್ಥಿಕತೆಯನ್ನು ನಾಶಪಡಿಸುವ ಪ್ರಣಾಳಿಕೆಯನ್ನು ಮಾಡಿದೆ. ನಾನು ಈ ಪ್ರಣಾಳಿಕೆಯು ತುಷ್ಟೀಕರಣವಲ್ಲದೆ ಬೇರೇನೂ ಅಲ್ಲ ಎಂಬುದನ್ನು ತೋರಿಸಲು ಸಾರ್ವಜನಿಕ ಚರ್ಚೆಗೆ ಬರುವಂತೆ ಸವಾಲು ಹಾಕುವುದಾಗಿ ಹೇಳಿದರು.

ಲೋಕಸಭೆ ಚುನಾವಣೆ 2024ರ ಪ್ರಯುಕ್ತ ಕಾಂಗ್ರೆಸ್ ಪಕ್ಷವು ತನ್ನ ‘ನ್ಯಾಯ ಪತ್ರ’ ಚುನಾವಣಾ ಪ್ರಣಾಳಿಕೆಯನ್ನು ಏ.5ರಂದು ಬಿಡುಗಡೆ ಮಾಡಿತು. ಇದರ ಕುರಿತು ಪ್ರಧಾನಮಂತ್ರಿಯವರು ಸರಿಯಾಗಿ ಹೇಳಿದ್ದಾರೆ. ಈ ದೇಶದ ಸಂಪನ್ಮೂಲಗಳಲ್ಲಿ ಎಲ್ಲರಿಗೂ ಹಕ್ಕಿದೆ ಎಂದು ಹೇಳಿದ್ದರು.

ಏಪ್ರಿಲ್ 21ರಂದು ರಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ನ ಪ್ರಣಾಳಿಕೆಯು ತಾಯಿ ಮತ್ತು ಸಹೋದರಿಯರ ಚಿನ್ನ ತೆಗೆದು ಕೊಂಡು ಆ ಸಂಪತ್ತನ್ನು ಹಂಚುವ ಬಗ್ಗೆ ಮಾತನಾಡುತ್ತದೆ. ಅವರ ಮಂಗಳಸೂತ್ರವೂ ಅದರಲ್ಲಿ ಸೇರಿದೆ. ಚಿನ್ನದ ಬೆಲೆಯ ಪ್ರಶ್ನೆಯಲ್ಲ, ಅದು ಅವಳ ಜೀವನದ ಕನಸುಗಳಿಗೆ ಸಂಬಂಧಿಸಿದೆ. ಅದನ್ನು ನಿಮ್ಮ ಪ್ರಣಾಳಿಕೆಯಲ್ಲಿ ಕಸಿದುಕೊಳ್ಳುವ ಬಗ್ಗೆ ಹೇಗೆ ಮಾತನಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.