Friday, 13th December 2024

ಪ್ರಧಾನಿ ಮೋದಿ ತಾಯಿ ಹೀರಾಬೆನ್‌ ನಿಧನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್‌ ಮೋದಿ ಅನಾ ರೋಗ್ಯದ ಕಾರಣದಿಂದ ಶುಕ್ರವಾರ ನಿಧನರಾಗಿದ್ದಾರೆ.

ಹೀರಾಬೆನ್‌ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಸೇರಿದಂತೆ ಹಲವು ರಾಜಕೀಯ ಗಣ್ಯರು ತಮ್ಮ ಸಂತಾಪ ಸೂಚಿಸಿದ್ದಾರೆ.

ʻಮಾತಾಶ್ರೀ ಹೀರಾಬೆನ್‌ ನಿಧನದಿಂದ ನನಗೆ ಅತೀವ ದುಃಖವಾಗಿದೆ. ತಾಯಿಯ ಸಾವು ಜೀವನದಲ್ಲಿ ತುಂಬಲಾಗದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ಪ್ರಧಾನಿ ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಓಂ ಶಾಂತಿ!ʼ ಎಂದು ರಾಜನಾಥ್‌ ಸಿಂಗ್‌ ಟ್ವೀಟ್‌ ಮಾಡಿದ್ದಾರೆ

ಗೃಹ ಸಚಿವ ಅಮಿತ್‌ ಶಾ ಕೂಡ ಹೀರಾಬೆನ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ʻಕುಟುಂಬ ಪೋಷಣೆಗಾಗಿ ಹೀರಾಬೆನ್ ಅವರು ಎದುರಿಸಿದ್ದ ಹೋರಾಟ ಎಲ್ಲರಿಗೂ ಮಾದರಿಯಾಗಿದೆ. ಅವರ ತ್ಯಾಗದ ತಪಸ್ವಿ ಜೀವನ ಸದಾ ನಮ್ಮ ನೆನಪಿನಲ್ಲಿ ಉಳಿಯುತ್ತದೆ. ಈ ದುಃಖದ ಸಮಯದಲ್ಲಿ ಇಡೀ ರಾಷ್ಟ್ರವು ಪ್ರಧಾನಿ ಮೋದಿ ಮತ್ತು ಅವರ ಕುಟುಂಬದೊಂದಿಗೆ ನಿಂತಿದೆ. ಕೋಟಿ ಕೋಟಿ ಜನರ ಪ್ರಾರ್ಥನೆ ನಿಮ್ಮೊಂದಿಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಸಹ ಮೋದಿ ಅವರ ತಾಯಿ ನಿಧನದ ಸುದ್ದಿ ಕೇಳಿ ತಮ್ಮ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.