Wednesday, 8th January 2025

HMP Virus : ನಾಗ್ಪುರದಲ್ಲೂ HMP ವೈರಸ್‌ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 7ಕ್ಕೇರಿಕೆ

HMP Virus

ಮುಂಬೈ: ಜಗತ್ತನ್ನು ಕಾಡಿದ್ದ ಕೊರೋನಾ ಮಹಾಮಾರಿಯ ನಂತರ ಇದೀಗ ಹೊಸ ವೈರಸ್‌ ಒಂದು ಜಗತ್ತನ್ನು ಬೆಚ್ಚಿಬೀಳುವಂತೆ ಮಾಡಿದೆ. ಚೀನಾದಲ್ಲಿ ವೇಗವಾಗಿ ಹಬ್ಬುತ್ತಿರುವ ಹ್ಯೂಮನ್‌ ಮೆಟಾಪ್ನ್ಯೂಮೋ‌ ವೈರಸ್ (HMP Virus ) ಭಾರತಕ್ಕೂ ಕಾಲಿಟ್ಟಿದ್ದು, ನಾಗ್ಪುರದಲ್ಲಿ( Nagpur) ಏಳು ಮತ್ತು 14 ವರ್ಷ ವಯಸ್ಸಿನ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 7 ಕ್ಕೆ ಏರಿಕೆ ಆಗಿದೆ.

ಜನವರಿ 3 ರಂದು ಜ್ವರ ಮತ್ತು ಕೆಮ್ಮು ಚಿಕಿತ್ಸೆಗಾಗಿ ಮಕ್ಕಳನ್ನು ನಗರದ ರಾಮದಾಸ್‌ಪೇಟ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷೆಗಳನ್ನು ನಡೆಸಿದ ನಂತರ, ಆಸ್ಪತ್ರೆಯ ಅಧಿಕಾರಿಗಳು ಇಬ್ಬರಿಗೆ HMPV ಸೋಂಕಿಗೆ ಒಳಗಾಗಿದ್ದಾರೆ ಎಂದು ದೃಢಪಡಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಮಹಾರಾಷ್ಟ್ರ  ಆರೋಗ್ಯ ಇಲಾಖೆಯು ಅಲರ್ಟ್ ಆಗಿದ್ದು, ಕೆಮ್ಮು, ಜ್ವರ ಅಥವಾ ಯಾವುದೇ ತೀವ್ರವಾದ ಉಸಿರಾಟದ ಸೋಂಕಿನಿಂದ (SARI) ಬಳಲುತ್ತಿರುವ ಜನರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಹೇಳಿದೆ.

ನಾಗ್ಪುರದಲ್ಲಿ ಕೇಸ್‌ ದಾಖಲಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಆರೋಗ್ಯ ಸಚಿವ ಪ್ರಕಾಶ್ ಅಬಿತ್ಕರ್ ಅವರು ಸೇಂಟ್ ಜಾರ್ಜ್ ಆಸ್ಪತ್ರೆ ಆರೋಗ್ಯ ಕೇಂದ್ರದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆಗೆ ಕರೆದಿದ್ದಾರೆ. ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಪ್ರತಾಪರಾವ್ ಜಾಧವ್ ಕೂಡ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರ ಸರ್ಕಾರ ರಾಜ್ಯದ ಜನರು ಭಯಭೀತರಾಗದೆ ಶಾಂತವಾಗಿರುವಂತೆ ಇಲಾಖೆ ಮನವಿ ಮಾಡಿದೆ. ವೈರಸ್ ವಿರುದ್ಧದ ತಡೆಗಟ್ಟುವಿಕೆ ಮತ್ತು ಕ್ರಮಗಳ ಕುರಿತು ಇದು ಶೀಘ್ರದಲ್ಲೇ ಮಾರ್ಗಸೂಚಿಗಳನ್ನು ನೀಡುತ್ತದೆ ಎಂದು ಹೇಳಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಪೂರ್ವ ಚಂದ್ರ, ಮಂಗಳವಾರ ಎಚ್‌ಎಂಪಿವಿ ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ದೇಶದಲ್ಲಿ ಉಸಿರಾಟದ ಕಾಯಿಲೆಗಳ ಉಲ್ಬಣವಿಲ್ಲ ಎಂದು ಅವರು ಹೇಳಿದರು ಮತ್ತು ಅಂತಹ ಪ್ರಕರಣಗಳನ್ನು ಪತ್ತೆಹಚ್ಚಲು ದೃಢವಾದ ಕಣ್ಗಾವಲು ನಡೆಯುತ್ತಿದೆ ಎಂದು ಒತ್ತಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ 8 ತಿಂಗಳ ಹಾಗೂ 3 ತಿಂಗಳ ಮಗುವಿನಲ್ಲಿ ಎಚ್​ಎಂಪಿವಿ (HMPV) ವೈರಸ್ ದೃಢಪಟ್ಟಿದೆ. ಮೊದಲನೆಯ ಪ್ರಕರಣದಲ್ಲಿ 8 ತಿಂಗಳ ಮಗುವಿಗೆ ಜ್ವರ ಬಂದ ಕಾರಣ ಕೆಲವು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಗುಜರಾತಿನಲ್ಲಿ ಕೂಡ ಈ ವೈರಸ್‌ ಪತ್ತೆಯಾಗಿದೆ.

ಈ ಸುದ್ದಿಯನ್ನೂ ಓದಿ : HMPV Virus: ಗುಜರಾತ್‌ನಲ್ಲೂ HMPV ವೈರಸ್‌ ದೃಢ-ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆ

Leave a Reply

Your email address will not be published. Required fields are marked *