Saturday, 14th December 2024

ತಪೋವನ್ ಪ್ರದೇಶದಲ್ಲಿ ಹಿಮಪಾತ: ಇಂದು ಸಚಿವ ಅಮಿತ್‌ ಶಾ ಭೇಟಿ

ಉತ್ತರಾಖಂಡ: ರಾಜ್ಯದ ಚಮೋಲಿ ಜಿಲ್ಲೆಯ ತಪೋವನ್ ಪ್ರದೇಶದಲ್ಲಿ ಹಿಮಪಾತ ಸಂಭವಿಸಿ, ಧೌಲಿಗಂಗಾ ನದಿಯಲ್ಲಿ ದಿಢೀರ್ ಪ್ರವಾಹಕ್ಕೆ 150ಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದಾರೆ.

ದುರಂತದ ಮಾಹಿತಿ ಪಡೆದಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂಜೆ ವೇಳೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಟ್ವೀಟ್ ಮಾಡಿರುವ ಗೃಹ ಸಚಿವರು, ‘ಉತ್ತರಾಖಂಡದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದ ಕುರಿತು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ಬಳಿ ಮಾಹಿತಿ ಪಡೆದುಕೊಂಡಿದ್ದೇನೆ. ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಸಂತ್ರಸ್ತರ ಪ್ರಾಣ ಉಳಿಸಲು ಸಮರೋಪಾಯ ದಲ್ಲಿ ಕೆಲಸ ಮಾಡುತ್ತಿದ್ದಾರೆ. ದೇವಭೂಮಿ ರಕ್ಷಣೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು’ ಎಂದಿದ್ದಾರೆ.