Sunday, 15th December 2024

ರಾಮನವಮಿ ವೇಳೆ ಹಿಂಸಾಚಾರ: ಎನ್‌ಐಎ ತನಿಖೆಗೆ ಆದೇಶ

ವದೆಹಲಿ: ಈ ವರ್ಷದ ರಾಮನವಮಿ ಸಂದರ್ಭದಲ್ಲಿ ಹೌರಾ, ಹೂಗ್ಲಿ ಮತ್ತು ದಲ್ಖೋಲಾದಲ್ಲಿ ನಡೆದ ಹಿಂಸಾಚಾರದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಗುರುವಾರ ಆದೇಶಿಸಿದೆ.

ಎರಡು ವಾರಗಳಲ್ಲಿ ತನಿಖೆಗೆ ಸಂಬಂಧಿಸಿದ ಎಲ್ಲಾ ಅಗತ್ಯ ದಾಖಲೆಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸುವಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ವಿಭಾಗೀ ಯ ಪೀಠವು ಪಶ್ಚಿಮ ಬಂಗಾಳ ಪೊಲೀಸರಿಗೆ ಆದೇಶಿಸಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ನೇತೃತ್ವದ ಪೀಠವು ಪ್ರಕರಣದ ದಾಖಲೆಗಳನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸುವಂತೆ ರಾಜ್ಯ ಪೊಲೀಸರಿಗೆ ಆದೇಶಿ ಸಿದ್ದು, ಇದರಿಂದ ಎನ್‌ಐಎ ತನ್ನ ತನಿಖೆಯನ್ನು ಪ್ರಾರಂಭಿಸಬಹುದು.

ಪಶ್ಚಿಮ ಬಂಗಾಳದಲ್ಲಿ ರಾಮನವಮಿಯ ಹಿಂಸಾಚಾರದ ಬಗ್ಗೆ ಎನ್‌ಐಎ ತನಿಖೆಗೆ ಕೋರಿ ಬಿಜೆಪಿ ಶಾಸಕ ಸುಭೇಂದು ಅಧಿಕಾರಿ ಪಿಐಎಲ್ ಮೇಲೆ ಹೈಕೋರ್ಟ್ ಈ ಆದೇಶ ನೀಡಿದೆ.‌