Thursday, 12th December 2024

ಹಿ.ಪ್ರದೇಶ ವಿಧಾನಸಭೆ ಚುನಾವಣೆ: ನ.12ರಂದು ಮತದಾನ

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ನ.12ರಂದು ಮತದಾ ನ ನಡೆಯಲಿದೆ.

ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 68 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮಧ್ಯೆ ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಆಮ್ ಆದ್ಮಿ ಪಾರ್ಟಿ ಕೂಡ ಪ್ರಮುಖ ಪಾತ್ರ ನಿರ್ವಹಿಸುವ ಸಾಧ್ಯತೆ ಇದೆ.

1990ರ ದಶಕದಿಂದ ಈಚೆಗೆ, ಹಿಮಾಚಲ ಪ್ರದೇಶದ ಚುನಾವಣೆಯ ಪ್ಯಾಟರ್ನ್ ಗಮನಿಸಿದರೆ, ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ.. ಹೀಗೆ ಅಧಿಕಾರವನ್ನು ಹಿಡಿದಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶಕ್ಕೆ ಎರಡು ಬಾರಿ ಭೇಟಿ ನೀಡಿ, ಚುನಾವಣಾ ಪ್ರಚಾರವನ್ನು ಕೈಗೊಂಡಿ ದ್ದಾರೆ. ಕಾಂಗ್ರೆಸ್ ಪರವಾಗಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪ್ರಚಾರ ಕೈಗೊಂಡಿದ್ದಾರೆ. ಡಿಸೆಂಬರ್ 1 ಮತ್ತು 5ರಂದು ಗುಜರಾತ್‌ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಎರಡೂ ರಾಜ್ಯಗಳ ಎಲೆಕ್ಷನ್ ರಿಸಲ್ಟ್ ಡಿಸೆಂಬರ್ 8ರಂದು ಪ್ರಕಟಿಸಲಿದೆ.