Monday, 25th November 2024

ರೈತರ ಪ್ರತಿಭಟನೆಯಿಂದ ವಾಣಿಜ್ಯ ಚಟುವಟಿಕೆಗಳಿಗೆ ಧಕ್ಕೆ: ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

 ನವದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ಆಗ್ರಹಿಸಿ, ದೆಹಲಿಯ ಗಡಿಗಳಲ್ಲಿ ರೈತರು ನಡೆಸು ತ್ತಿರುವ ಪ್ರತಿಭಟನೆಯಿಂದ ವಾಣಿಜ್ಯ ಚಟುವಟಿಕೆ ಗಳು ಹಾಗೂ ಜನರ ಸಂಚಾರದ ಮೇಲಾಗುತ್ತಿರುವ ಪರಿಣಾಮಗಳ ಕುರಿತು ವರದಿ ಸಲ್ಲಿಸುವಂತೆ, ಕೇಂದ್ರ ಸರ್ಕಾರ, ದೆಹಲಿ, ರಾಜಸ್ಥಾನ, ಹರಿಯಾಣ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರಗಳಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸೂಚನೆ ನೀಡಿದೆ.

ರೈತರ ಪ್ರತಿಭಟನೆಯಿಂದಾಗಿ, ವಿವಿಧ ಕ್ಷೇತ್ರಗಳ ಮೇಲೆ ಆಗುತ್ತಿರುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಿ, ಅಕ್ಟೋಬರ್‌ 10ರ ಒಳಗಾಗಿ ವರದಿ ಸಲ್ಲಿಸು ವಂತೆ ಆರ್ಥಿಕ ಪ್ರಗತಿ ಸಂಸ್ಥೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ದೆಹಲಿ ವಿವಿ ದೆಹಲಿ ಸ್ಕೂಲ್‌ ಆಫ್‌ ಸೋಷಿಯಲ್‌ ವರ್ಕ್‌ಗೆ ಸೂಚನೆ ನೀಡಲಾ ಗಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ರೈತರು ಪ್ರತಿಭಟನೆ ಮುಂದುವರಿಸಿದ್ದರಿಂದ ಉದ್ದಿಮೆಗಳ ಮೇಲೆ ಸಾಕಷ್ಟು ದುಷ್ಪರಿಣಾಮ ವಾಗುತ್ತಿದೆ ಎಂಬ ಬಗ್ಗೆ ದೂರುಗಳು ಬಂದಿವೆ. ಸೂಕ್ಷ್ಮ, ಮಧ್ಯಮ ಹಾಗೂ ಬೃಹತ್‌ ಕೈಗಾರಿಕೆಗಳು ಸೇರಿದಂತೆ 9,000ಕ್ಕೂ ಅಧಿಕ ಉದ್ದಿಮೆಗಳ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ ಎಂಬ ದೂರುಗಳು ಬಂದಿವೆ’ ಎಂದು ಆಯೋಗ ಹೇಳಿದೆ.

ಪ್ರತಿಭಟನೆಯಿಂದಾಗಿ ವಾಹನಗಳ ಸಂಚಾರಕ್ಕೆ ವಿಪರೀತ ತೊಂದರೆಯಾಗಿದೆ. ರೋಗಿಗಳ ಸಾಗಣೆಗೆ, ಅಂಗ ವಿಕಲರು ಹಾಗೂ ಹಿರಿಯ ನಾಗರಿಕರ ಓಡಾಟಕ್ಕೂ ತೊಂದರೆಯಾಗಿದೆ ಎಂಬಂಥ ದೂರುಗಳು ಸಹ ಬಂದಿವೆ’ ಎಂದು ಆಯೋಗ ತಿಳಿಸಿದೆ.