Wednesday, 11th December 2024

ಫ್ರಾಂಕ್ನೆಸ್ ಮೆಚ್ಚಿದ್ದೇನೆ, ಮಾಧ್ಯಮದ ಮೂಲಕ ಸಂವಹನ ಅಗತ್ಯವಿಲ್ಲ: ಸೋನಿಯಾ ಗಾಂಧಿ

ನವದೆಹಲಿ: ಮಾಧ್ಯಮದ ಮೂಲಕ ನನ್ನೊಂದಿಗೆ ಸಂವಹನ ನಡೆಸುವ ಅಗತ್ಯವಿಲ್ಲ ಎಂದು ಸಿಡಬ್ಲ್ಯೂಸಿ ಸಭೆಯಲ್ಲಿ 23 ನಾಯಕರಿಗೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಯಾವಾಗಲೂ ಫ್ರಾಂಕ್ನೆಸ್ ಅನ್ನು ಮೆಚ್ಚಿದ್ದೇನೆ. ಮಾಧ್ಯಮಗಳ ಮೂಲಕ ನನ್ನೊಂದಿಗೆ ಮಾತನಾಡುವ ಅಗತ್ಯವಿಲ್ಲ. ಕೊಠಡಿಯ ನಾಲ್ಕು ಗೋಡೆಗಳ ಹೊರಗೆ ಏನು ಸಂವಹನ ನಡೆಸಬೇಕು ಎಂಬುದು ಕಾಂಗ್ರೆಸ್ ಕಾರ್ಯತಂತ್ರದ ಸಾಮೂಹಿಕ ನಿರ್ಧಾರವಾಗಿದೆ” ಎಂದು ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಚೇರಿಯಲ್ಲಿ ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಸೋನಿಯಾ ಹೇಳಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ, ಕಾಂಗ್ರೆಸ್‌ನ 23 ಸದಸ್ಯರ (ಜಿ -23) ನಿಯೋಗವು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಿಗೆ ಪತ್ರ ಬರೆದು ಸಾಂಸ್ಥಿಕ ಸುಧಾರಣೆಗಳಿಗಾಗಿ ಒತ್ತಾಯಿಸಿತ್ತು.

ಪಕ್ಷದ ಹಿತಾಸಕ್ತಿಗಳ ಮೇಲೆ ಮಾತ್ರ ಗಮನ ಹರಿಸಿದರೆ, ನಾವು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇವೆ ಎಂಬ ವಿಶ್ವಾಸ ವಿದೆ. ಆಯಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳು ನಮಗೆ ಮಾಹಿತಿ ನೀಡುತ್ತಾರೆ. ಹಾಗಾಗಿ ಈ ವಿಷಯದ ಬಗ್ಗೆ ನಾನು ಈಗ ಹೆಚ್ಚಿಗೆ ಏನನ್ನೂ ಹೇಳಲು ಇಷ್ಟಪಡುವುದಿಲ್ಲ” ಎಂದು ಸೋನಿಯಾ ಹೇಳಿದ್ದಾರೆ.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಚುನಾವಣಾ ಸೋಲಿನ ಜವಾಬ್ದಾರಿಯನ್ನು ಸ್ವೀಕರಿಸಿದ ರಾಹುಲ್ ಗಾಂಧಿ ಅವರು, ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಸೋನಿಯಾ ಗಾಂಧಿಯನ್ನು ಸಿಡಬ್ಲ್ಯುಸಿ ಹಂಗಾಮಿ ಅಧ್ಯಕ್ಷರನ್ನಾಗಿ ಮಾಡಿದೆ.