ಬೆಂಗಳೂರು: ಸೇನೆಗೆ ಸೇರ ಬಯಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್. ಭಾರತೀಯ ವಾಯು ಸೇನೆ (ndian Air Force)ಯು ಅಗ್ನಿವೀರವಾಯು ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ (IAF Agniveervayu Recruitment 2025). ಆಸಕ್ತರು 2025ರ ಜ. 7ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜ. 27. ಆನ್‌ಲೈನ್ ಪರೀಕ್ಷೆ 2025ರ ಮಾ. 22ರಿಂದ ನಡೆಯಲಿದೆ. ಹಾಗಾದರೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವುದು ಹೇಗೆ? ಅರ್ಹತೆ ಏನಿರಬೇಕು? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ (Job Guide).
ವಯೋಮಿತಿ ಮತ್ತು ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2005ರ ಜ. 1ರಿಂದ 2008ರ ಜು. 1ರೊಳಗೆ ಜನಿಸಿರಬೇಕು. ಅಂದರೆ ಕನಿಷ್ಠ ವಯಸ್ಸು 17.5 ವರ್ಷ ಮತ್ತು ಗರಿಷ್ಠ ವಯಸ್ಸು 21 ವರ್ಷ. ಅಭ್ಯರ್ಥಿಗಳು ಇಂಟರ್ ಮಿಡಿಯೇಟ್/+2 (ದ್ವಿತೀಯ ಪಿಯುಸಿ)/ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 12ನೇ ತರಗತಿಯಲ್ಲಿ ಗಣಿತಶಾಸ್ತ್ರ, ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯ ಒಳಗೊಂಡಿರಬೇಕು. ಒಟ್ಟಾರೆಯಾಗಿ ಕನಿಷ್ಠ ಶೇ. 50ರಷ್ಟು ಅಂಕ ಹೊಂದಿರುವುದು ಕಡ್ಡಾಯ.
ಎತ್ತರ: ಅಭ್ಯರ್ಥಿಗಳ ಕನಿಷ್ಠ ಎತ್ತರ 152 ಸೆಂ.ಮೀ.
ಎದೆ: ಪುರುಷ ಅಭ್ಯರ್ಥಿಗಳು ಕನಿಷ್ಠ 77 ಸೆಂ.ಮೀ. ಎದೆಯ ಸುತ್ತಳತೆ ಹೊಂದಿರಬೇಕು ಮತ್ತು 5 ಸೆಂ.ಮೀ. ವಿಸ್ತರಣೆಯನ್ನು ಹೊಂದಿರಬೇಕು.
ಆಯ್ಕೆ ವಿಧಾನ ಮತ್ತು ಅರ್ಜಿ ಶುಲ್ಕ
ಆನ್‌ಲೈನ್ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಎಸ್‌ಸಿ/ಎಸ್‌ಟಿ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಉಳಿದೆಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 550 ರೂ. ಪಾವತಿಸಬೇಕು. ಪಾವತಿ ವಿಧಾನ ಆನ್‌ಲೈನ್. ಡೆಬಿಡ್, ಕ್ರೆಡಿಟ್ ಕಾರ್ಡ್ ಅಥವಾ ಇಂಟರ್‌ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದು.
IAF Agniveervayu Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಿವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://agnipathvayu.cdac.in/AV/) - IAF AgniveerVayu recruitment 2024 ಆಯ್ಕೆ ಮೇಲೆ ಕ್ಲಿಕ್ ಮಾಡಿ.
- ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಈ ಸುದ್ದಿಯನ್ನೂ ಓದಿ: SBI Recruitment 2025: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್; SBIನಲ್ಲಿದೆ ಬರೋಬ್ಬರಿ 13 ಸಾವಿರ ಹುದ್ದೆ: ಹೀಗೆ ಅಪ್ಲೈ ಮಾಡಿ