Saturday, 14th December 2024

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಜೈಪುರ: ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಮಂಗಳವಾರ ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ಜಮೀನೊಂದ ರಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಲಿಕಾಪ್ಟರ್‌ನಲ್ಲಿದ್ದ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಹೇಳಿದರು.

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಮಂಗಳವಾರ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಸಂಗಾರಿಯಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಹನುಮಾನ್‌ರಾಮ್ ವಿಷ್ಣೋಯ್ ಮಾಹಿತಿ ನೀಡಿದ್ದಾರೆ.

‘ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಅದರಲ್ಲಿನ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ” ಎಂದು ಹೇಳಿದರು.