Wednesday, 30th October 2024

ಬಿಜಾಪುರ ಜಿಲ್ಲೆಯಲ್ಲಿ ಐಇಡಿ ಸ್ಫೋಟ: ಇಬ್ಬರು ಯೋಧರ ಸಾವು

ಬಿಜಾಪುರ: ತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲೀಯರು ನಡೆಸಿದ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟದಲ್ಲಿ ಇಬ್ಬರು ಯೋಧರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದಾರೆ.

ಎಸ್‌ಟಿಎಫ್‌ನ ಮುಖ್ಯ ಕಾನ್ಸ್‌ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೆಬಲ್ ಸತೇರ್ ಸಿಂಗ್ ಅವರು ಕರ್ತವ್ಯದ ಸಾಲಿನಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ.

ಯೋಧರು ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಐಇಡಿ ಸ್ಫೋಟ ಸಂಭವಿಸಿದೆ. ಗಾಯಗೊಂಡಿರುವ ಯೋಧರು ಪ್ರಸ್ತುತ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉತ್ತಮ ವೈದ್ಯಕೀಯ ಸೇವೆಗಾಗಿ ಅವರನ್ನು ವಿಮಾನದಲ್ಲಿ ರಾಯ್‌ಪುರಕ್ಕೆ ಕರೆತರಲು ಸಿದ್ಧತೆ ನಡೆಸಲಾಗಿದೆ.