Friday, 22nd November 2024

ಬಂಗಾಳದಲ್ಲಿ ಬದಲಾವಣೆ ಗಾಳಿ ಬೀಸಬೇಕೆಂದರೆ ಮಮತಾ ಸೋಲಬೇಕು: ಶಾ

ನಂದಿಗ್ರಾಮ: ಈ ರಾಜ್ಯದಲ್ಲಿ ಬದಲಾವಣೆ ತರಬೇಕೆಂದರೆ ಸುಲಭವಾದ ಮಾರ್ಗ ನಂದಿಗ್ರಾಮದಲ್ಲಿ ಮಮತಾ ದೀದಿ ಸೋಲುವು ದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನಂದಿಗ್ರಾಮ ಕ್ಷೇತ್ರದಲ್ಲಿ ಮಂಗಳವಾರ ರೋಡ್ ಶೋ ನಡೆಸಿ ಸುವೇಂದು ಅಧಿಕಾರಿ ಪರ ಮತಯಾಚಿಸಿದ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದರು. ಜನರ ಉತ್ಸಾಹ ನೋಡಿದರೆ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಜಯಗಳಿಸಲಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮಮತಾ ಅವರು ಇರುವ 5 ಕಿಲೋ ಮೀಟರ್ ವ್ಯಾಪ್ತಿಯೊಳಗೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿದೆ ಎಂಬುದು. ಮುಖ್ಯಮಂತ್ರಿ ಇರುವ ಪ್ರದೇಶದಲ್ಲಿಯೇ ಅತ್ಯಾಚಾರ ನಡೆದಿದೆ ಎಂದಾದರೆ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿರಲು ಹೇಗೆ ಸಾಧ್ಯ’ ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.

ಬಿಜೆಪಿ ಕಾರ್ಯಕರ್ತನ ತಾಯಿಯ ಮೇಲೆ ಹಲ್ಲೆ ನಡೆಸಲಾಗಿತ್ತು. ಅವರು ಮೃತಪಟ್ಟಿದ್ದಾರೆ. ಮಮತಾ ದೀದಿ ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುತ್ತಿದ್ದಾರೆ. ಈ ವಿರೋಧಾಭಾಸವನ್ನು ಜನತೆ ಗಮನಿಸುತ್ತಿದೆ ಎಂದು ಹೇಳಿದ್ದಾರೆ.

ಇಡೀ ಬಂಗಾಳವು ಒಳನುಸುಳುವಿಕೆಯನ್ನು ಬಯಸುತ್ತಿಲ್ಲ. ಬದಲಿಗೆ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನ ಬಯಸುತ್ತಿದೆ ಎಂದೂ ಹೇಳಿದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ