ನಗರದ ಪೆಟ್ರೋಲ್ ಪಂಪ್‌ಗಳ ಹೊರಗೆ ಬೆಳಗ್ಗೆ 6 ಗಂಟೆಯಿಂದಲೇ ಜನ ಸಾಲುಗಟ್ಟಿ ನಿಂತಿದ್ದರು. ಬೆಳಗ್ಗೆ 5ರಿಂದ 11ರವರೆಗೆ ಕರ್ಫ್ಯೂ ಸಡಿಲಿಸಲಾಗಿದೆ. ಕರ್ಫ್ಯೂ ಸಡಿಲಿಕೆಯ ಸಮಯದಲ್ಲಿ, ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಹೊರಗೆ ಬರಲು ಅನುಮತಿ ಸಲಾಗುವುದು ಮತ್ತು ಇತರ ಉದ್ದೇಶಗಳಿಗಾಗಿ ಸೇರಬಾರದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಕೆಲವು ಭಾಗಗಳಲ್ಲಿ ನಡೆದ ಹಿಂಸಾಚಾರದಲ್ಲಿ ಸುಮಾರು 60 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಮಣಿಪುರ ಹಿಂಸಾಚಾರದಲ್ಲಿ 231 ಜನರು ಗಾಯಗೊಂಡಿದ್ದಾರೆ. ಸುಮಾರು 1,700 ಮನೆಗಳು ಸುಟ್ಟು ಭಸ್ಮವಾಗಿವೆ. ಒಂದು ವಾರದ ಹಿಂದೆ ಮಣಿಪುರದ ಬಹುಸಂಖ್ಯಾತ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ ನಂತರ ಈಶಾನ್ಯ ರಾಜ್ಯದಲ್ಲಿ ಘರ್ಷಣೆಗಳು ಸ್ಫೋಟಗೊಂಡವು.