Thursday, 12th December 2024

ಶಂಕಿತ ಕುಕಿ ಉಗ್ರರೊಂದಿಗೆ ಗುಂಡಿನ ಚಕಮಕಿ

ಇಂಫಾಲ್ : ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯ ಗಡಿ ಪಟ್ಟಣ ಮೋರೆಹ್ ನಲ್ಲಿ ಬುಧವಾರ ಭದ್ರತಾ ಪಡೆಗಳು ಶಂಕಿತ ಕುಕಿ ಉಗ್ರರೊಂದಿಗೆ ಗುಂಡಿನ ಚಕಮಕಿಯಲ್ಲಿ ತೊಡಗಿವೆ.

ಚಕಮಕಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ . ಮೃತನನ್ನು ಐಆರ್ಬಿ ಸಿಬ್ಬಂದಿ ವಾಂಗ್ಖೆಮ್ ಸೊಮೊರ್ಜಿತ್ ಎಂದು ಗುರುತಿಸಲಾಗಿದೆ.

ಎಸ್ಬಿಐ ಮೋರೆ ಬಳಿ ಭದ್ರತಾ ಪಡೆಗಳ ಮೇಲೆ ಉಗ್ರರು ಬಾಂಬ್ ಗಳನ್ನು ಎಸೆದು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ದಾಳಿಗೆ ಪ್ರತಿಯಾಗಿ, ಭದ್ರತಾ ಪಡೆಗಳು ಪ್ರತೀಕಾರ ತೀರಿಸಿಕೊಂಡವು, ಇದರ ಪರಿಣಾಮವಾಗಿ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿದು ಬಂದಿದೆ.