Monday, 14th October 2024

ಅಡುಗೆ ಎಣ್ಣೆ ಮೇಲಿನ ಆಮದು ಸುಂಕಕ್ಕೆ ವಿನಾಯಿತಿ ವಿಸ್ತರಣೆ

ವದೆಹಲಿ: ಹಬ್ಬದ ಹೊತ್ತಲ್ಲೇ ಅಡುಗೆ ಎಣ್ಣೆ ದರ ಇಳಿಕೆಯಾಗಲಿದೆ. ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಅಡುಗೆ ಎಣ್ಣೆ ಮೇಲಿನ ಆಮದು ಸುಂಕಕ್ಕೆ ನೀಡಿರುವ ವಿನಾಯಿತಿಯನ್ನು ವಿಸ್ತರಣೆ ಮಾಡಿದೆ.

ಇದರಿಂದಾಗಿ ಅಡುಗೆ ಎಣ್ಣೆ ದರ ಇಳಿಕೆಯಾಗಲಿದೆ.

2023ರ ಮಾರ್ಚ್ 31 ರವರೆಗೆ ಅಡುಗೆ ಎಣ್ಣೆ ಮೇಲಿನ ಆಮದು ಸುಂಕಕ್ಕೆ ನೀಡಿರುವ ವಿನಾಯಿತಿಯನ್ನು ವಿಸ್ತರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸಚಿವಾಲಯ ತಿಳಿಸಿದೆ.

ಈ ಕ್ರಮದಿಂದಾಗಿ ಕಚ್ಚಾ ತಾಳೆ, ಕಚ್ಚಾ ಸೋಯಾ, ಕಚ್ಚಾ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಸೋಯಾ ಎಣ್ಣೆಗಳ ಮೇಲೆ ಯಾವುದೇ ಆಮದು ಸುಂಕ ಇರುವುದಿಲ್ಲ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆಯಾಗಲಿದೆ ಎಂದು ಹೇಳಲಾಗಿದೆ.