Friday, 13th December 2024

ಕೊರೊನಾ 2ನೇ ಅಲೆಗೆ ಭಾರತ ತತ್ತರ: 2,59,170 ಜನರಲ್ಲಿ ಸೋಂಕು ಪತ್ತೆ

#corona

ನವದೆಹಲಿ: ಕೊರೊನಾ 2ನೇ ಅಲೆಗೆ ಭಾರತ ತತ್ತರಿಸಿದೆ. ಕಳೆದ 24 ಗಂಟೆಯಲ್ಲಿ 2,59,170 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,53,21,089ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 1,761 ಜನರು ಮಹಾಮಾರಿಗೆ ಬಲಿಯಾಗಿ, ಸೋಂಕಿಗೆ ಬಲಿಯಾದವರ ಸಂಖ್ಯೆ 1,80,530ಕ್ಕೆ ಏರಿಕೆ ಯಾಗಿದೆ. ಇನ್ನು ದೇಶದಲ್ಲಿ 20,31,977 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,31,08,582 ಸೋಂಕಿತರು ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 26,94,14,035 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 11,11,79,578 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ತಿಳಿಸಿದೆ.