ನವದೆಹಲಿ: ಎಂಪಾಕ್ಸ್ (ಮಂಕಿಪಾಕ್ಸ್) ಇರುವ ದೇಶದಿಂದ ಮರಳಿದ ಪುರುಷ ರೋಗಿಯೊಬ್ಬರು ಅಪಾಯಕಾರಿ ವೈರಸ್‌ಗ (Monkeypox ) ಬಾಧಿತರಾಗಿದ್ದಾರೆ ಎಂದು ಹೇಳಲಾಗಿದ್ದು, ಇದು ಭಾರತದ ಮೊದಲ ಪ್ರಕರಣ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. ರೋಗಿಯನ್ನು ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.
ರೋಗಿಯು ಎಂಪಾಕ್ಸ್ ಸೋಂಕಿಗೆ ಒಳಗಾಗಿದ್ದಾರೆಯೇ ಎಂದು ಪರಿಶೀಲಿಸಲು ಸ್ಯಾಂಪಲ್‌ಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ ದೃಢಪಡಿಸಿದೆ.
ಎಂಪಾಕ್ಸ್ ಇರುವಿಕೆಯನ್ನು ಖಚಿತಪಡಿಸಿಕೊಳ್ಳಲು ರೋಗಿಯಿಂದ ಪಡೆದ ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗುತ್ತಿದೆ. ಪ್ರೋಟೋಕಾಲ್‌ಗಳಿಗೆ ಅನುಗುಣವಾಗಿ ಪ್ರಕರಣವನ್ನು ನಿರ್ವಹಿಸಲಾಗುತ್ತಿದೆ. ಸಂಭಾವ್ಯ ಮೂಲಗಳನ್ನು ಗುರುತಿಸುವ ಸಂಪರ್ಕ ಪತ್ತೆಹಚ್ಚುವಿಕೆ ನಡೆಯುತ್ತಿದೆ” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಭರವಸೆ ನೀಡಿದೆ. ಈ ಬೆಳವಣಿಗೆಯು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್‌ಡಿಸಿ) ನಡೆಸಿದ ಹಿಂದಿನ ಅಪಾಯದ ಪರಿಶೀಲನೆಗೆ ಅನುಗುಣವಾಗಿದೆ ಎಂದು ಹೇಳಿದೆ.
ಆತಂಕ ಅಗತ್ಯವಿಲ್ಲ
ಯಾವುದೇ ಅನಗತ್ಯ ಆತಂಕ ಪಡಬೇಕಾಗಿಲ್ಲ ಎಂದು ಎಂದು ಸಚಿವಾಲಯ ಹೇಳಿದೆ. ಪ್ರಯಾಣ ಸಂಬಂಧಿತ ಪ್ರಕರಣಗಳನ್ನು ಎದುರಿಸಲು ದೇಶವು ಸಂಪೂರ್ಣವಾಗಿ ಸಿದ್ಧವಾಗಿದೆ. ಸಂಭಾವ್ಯ ಅಪಾಯವನ್ನು ನಿರ್ವಹಿಸಲು ಮತ್ತು ತಗ್ಗಿಸಲು ದೃಢ ಕ್ರಮಗಳನ್ನು ನಿರ್ವಹಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಇದನ್ನೂ ಓದಿ: Manipur Violence: ಮಣಿಪುರ ಹಿಂಸಾಚಾರ; ರಾಜ್ಯಪಾಲರನ್ನು ಭೇಟಿಯಾದ ಸಿಎಂ ಬಿರೇನ್ ಸಿಂಗ್
ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) 12 ಆಫ್ರಿಕನ್ ದೇಶಗಳಲ್ಲಿ ಜಾಗತಿಕ ತುರ್ತುಸ್ಥಿತಿ ಎಂದು ಘೋಷಿಸಿದ ಮೂರು ವಾರಗಳ ನಂತರ ಭಾರತದಲ್ಲಿ ಶಂಕಿತ ಎಂಪಾಕ್ಸ್ ಪ್ರಕರಣ ಪತ್ತೆಯಾಗಿದೆ.