ಕೊಲ್ಕತ್ತಾ: ಎರಡಕ್ಕಿಂತ ಹೆಚ್ಚು ಸ್ಥಾನಗಳನ್ನು ಇಂಡಿಯಾ ಮೈತ್ರಿಕೂಟದ ಘಟಕ ಪಕ್ಷಕ್ಕೆ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ 8 ರಿಂದ 14 ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂಬ ಬೇಡಿಕೆ ಪ್ರಾಯೋಗಿಕವಲ್ಲ ಎಂದು ಕಾಂಗ್ರೆಸ್ ಪ್ರಸ್ತಾವವನ್ನು ತಿರಸ್ಕರಿಸಿದ್ದಾರೆ.
“ಅಗತ್ಯ ಬಿದ್ದರೆ, ನಾವು ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇವೆ. ಒಂದೇ ಪಕ್ಷವಾಗಿ ಹೋರಾಡಲು ಸಜ್ಜಾಗಿ” ಎಂದು ಟಿಎಂಸಿಯ ಬೀರ್ಭೂಮ್ ಮುಖಂಡರಿಗೆ ಕಾಳಿಘಾಟ್ ನಲ್ಲಿ ನಡೆದ ಸಭೆಯಲ್ಲಿ ಸ್ಪಷ್ಟ ಸೂಚನೆ ನೀಡಿದರು. ಕಾಂಗ್ರೆಸ್ ಪಕ್ಷ ಹೆಚ್ಚುರಿ ಸ್ಥಾನಗಳನ್ನು ಸಿಪಿಎಂ ಹಾಗೂ ಬಿಜೆಪಿಗೆ ಹಸ್ತಾಂತರಿಸಲು ಪ್ರಯತ್ನಿಸುತ್ತಿರುವುದನ್ನು ಅಲ್ಲಗಳೆಯುವಂತಿಲ್ಲ ಎಂದು ಹೇಳಿದರು.
ಬೀರ್ಬೂಮ್ ನ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಸ್ಪರ್ಧಿಸಲಿದೆ ಎಂದು ಸ್ಪಷ್ಟಪಡಿಸಿದರು.