Sunday, 15th December 2024

ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆ ಇಂದು

ನವದೆಹಲಿ: ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಡೆಯಾದ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜಂಟಿ ಪ್ರಚಾರ, ಸೀಟು ಹಂಚಿಕೆ ಮತ್ತು ಕಾರ್ಯತಂತ್ರ ಪುನರ್ ರೂಪಿಸುವ ಕುರಿತು ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ ಮಂಗಳವಾರ ನಡೆಯಲಿದೆ.

ಇಂದಿನ ಸಭೆಯಲ್ಲಿ “ಮೇನ್ ನಹಿಂ, ಹಮ್ (ನಾವು, ನಾನಲ್ಲ)” ಎಂಬ ಥೀಮ್ ನೊಂದಿಗೆ ಮುಂದುವರಿಯಲು ಪ್ರತಿಪಕ್ಷಗಳು ಉದ್ದೇಶಿಸಿವೆ. ಮಧ್ಯಾಹ್ನ 3 ಗಂಟೆಗೆ ಸಭೆ ನಿಗಧಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದರು. ಪ್ರತಿಪಕ್ಷಗಳ ಒಕ್ಕೂಟದ ನಾಲ್ಕನೇ ಸಭೆಯಾಗಿದೆ.

ಜೂನ್ 23 ರಂದು ಪಾಟ್ನಾದಲ್ಲಿ ಮೊದಲ ಸಭೆ, ಜುಲೈ 17-18 ರಂದು ಬೆಂಗಳೂರಿನಲ್ಲಿ 2ನೇ ಸಭೆ ಮತ್ತು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರ ನಡುವೆ ಮುಂಬೈನಲ್ಲಿ ಮೂರನೇ ಸಭೆ ನಡೆದಿತ್ತು.

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, 2024ರ ಸಾರ್ವತ್ರಿಕ ಚುನಾವಣೆ ನಂತರ ಪ್ರಧಾನ ಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸಲಾಗುವುದು ಎಂದು ಹೇಳಿದರು. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ನಡುವೆ ತ್ರಿಕೋನ ಮೈತ್ರಿ ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.