Saturday, 14th December 2024

ಡಿ.19 ರಂದು ಇಂಡಿಯಾ ಒಕ್ಕೂಟದ ನಾಲ್ಕನೇ ಸಭೆ

ವದೆಹಲಿ: ಇಂಡಿಯಾ ಒಕ್ಕೂಟದ ನಾಲ್ಕನೇ ಸಭೆ ಡಿ.19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಈ ಹಿಂದೆ ಡಿ.17 ರಂದು ಸಭೆ ನಿಗದಿಯಾಗಿತ್ತು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಮೈತ್ರಿಕೂಟದ ಉನ್ನತ ನಾಯಕರು ನಿರ್ಧರಿಸಿದ ಹಿನ್ನೆಲೆಯಲ್ಲಿ ಡಿ.6ರಂದು ನಿಗದಿಯಾಗಿದ್ದ ಸಭೆಯನ್ನು ಡಿ.17 ಕ್ಕೆ ಮುಂದೂಡಲಾಗಿತ್ತು.

ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ರಾಜಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟವಾದ ದಿನವೇ ಡಿ.6 ರಂದು ಕಾಂಗ್ರೆಸ್ ಸಭೆಯನ್ನು ಕರೆದಿತ್ತು . ಆದರೆ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆಯೇ ಪ್ರತಿಪಕ್ಷಗಳ ಸಭೆಯನ್ನು ಘೋಷಿಸಲಾಯಿತು.