Saturday, 14th December 2024

I.N.D.I.A ಮೈತ್ರಿ ಕೂಟ ಸಭೆಗೆ ಮಮತಾ ಬ್ಯಾನರ್ಜಿ ಗೈರು…!

ಕೋಲ್ಕತ್ತ: ಜೂನ್ 1 ರಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನೇತೃತ್ವದಲ್ಲಿ I.N.D.I.A ಮೈತ್ರಿ ಕೂಟ ನಾಯಕರ ಸಭೆ ಕರೆದಿದ್ದು, ಆದರೆ ಈ ಸಭೆಗೆ ತೃಣ ಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೈರು ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆಗೆ ಕೇವಲ ಒಂದು ಹಂತದ ಮತದಾನ ಮಾತ್ರ ಬಾಕಿ ಉಳಿದಿದೆ. ಜೂನ್ 4 ರಂದು ಫಲಿತಾಂಶ ಹೊರಬೀಳಲಿದ್ದು, NDA ಮತ್ತು I.N.D.I.A ಮೈತ್ರಿಕೂಟದ ನಾಯಕರು ಕಾತರದಿಂದ ಇದರ ನಿರೀಕ್ಷೆಯಲ್ಲಿದ್ದಾರೆ.

ಪ್ರಸ್ತುತ ವಾಯುಭಾರ ಕುಸಿತದಿಂದ ಬಂಗಾಳ ಕೊಲ್ಲಿಯಲ್ಲಿ ರೆಮೆಲ್ ಚಂಡಮಾರುತ ಬೀಸುತ್ತಿದ್ದು, ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶದ ಜನರು ತತ್ತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಬೇಕಿರುವುದು ಹಾಗೂ ಆ ಸಂದರ್ಭದಲ್ಲಿ ಚುನಾವಣೆ ಇರುವ ಕಾರಣ ತಾವು ಜೂನ್ ಒಂದರ I.N.D.I.A ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.