ಕೇಂದ್ರ ಸಚಿವರಾದ ಹರ್ದೀಪ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ಆರ್ಕೆ ಸಿಂಗ್ ಅವರು ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಸಂಘಟಿಸಲು ಮತ್ತು ಸಹಾಯ ಮಾಡಲು ನೆರೆಯ ದೇಶಗಳಿಗೆ ತೆರಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಹಲವು ಸಚಿವರು ಸಭೆಯಲ್ಲಿ ಭಾಗವಹಿಸಿದ್ದರು.
ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಖಾತ್ರಿಪಡಿಸುವುದು ಮತ್ತು ಅವರನ್ನು ಸ್ಥಳಾಂತರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರತಿಪಾದಿಸಿದ್ದರು.