Saturday, 14th December 2024

ಶಾಂತಿಪಾಲನಾ ಪಡೆಯ ಇಬ್ಬರು ಭಾರತೀಯ ಯೋಧರ ಸಾವು

ನವದೆಹಲಿ: ಮಧ್ಯ ಆಫ್ರಿಕಾದ ಕಾಂಗೋ ದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭಾರತೀಯ ಯೋಧರು ಸೇರಿದಂತೆ ಐವರು ಮೃತ ಪಟ್ಟಿದ್ದಾರೆ.

ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ 50 ಜನರು ಗಾಯಗೊಂಡಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಭಾರತೀಯ ಯೋಧರು ಹುತಾತ್ಮರಾದ ಬಗ್ಗೆ ಖಚಿತಪಡಿಸಿದ್ದಾರೆ. ಯೋಧರನ್ನು ಕಳೆದುಕೊಂಡಿರು ವುದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾಂಗೊ ಪ್ರಜಾಸತ್ತಾತ್ಮಕ ಗಣರಾಜ್ಯದಲ್ಲಿ ಬಿಎಸ್‌ಎಫ್‌ನ ಇಬ್ಬರು ಭಾರತೀಯ ಶಾಂತಿಪಾಲಕರ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ಅವರು ಮೊನುಸ್ಕೋದ ಭಾಗವಾಗಿದ್ದರು. ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಮೃತ ಬಿಎಸ್​ಎಫ್​ ಯೋಧರು ಹೆಡ್ ಕಾನ್‌ಸ್ಟೇಬಲ್ ಶ್ರೇಣಿಯಲ್ಲಿದ್ದರು. ರಾಜಸ್ಥಾನ ಮೂಲದವರು ಎಂದು ಹಿರಿಯ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ.

ಕಾಂಗೋ ದೇಶದಲ್ಲಿ ವಿಶ್ವಸಂಸ್ಥೆಯ ಕಾರ್ಯಾಚರಣೆ ವಿರುದ್ಧ ಕಾಂಗೋದ ಪೂರ್ವ ನಗರವಾದ ಗೋಮಾದಲ್ಲಿ ಎರಡನೇ ದಿನದ ಪ್ರತಿಭಟನೆಯಲ್ಲಿ ಕನಿಷ್ಠ ಐದು ಜನರು ಮೃತಪಟ್ಟಿದ್ದಾರೆ.