Saturday, 14th December 2024

ಇಂಡಿಯನ್ ಓವರ್‌ಸೀಸ್ ಬ್ಯಾಂಕಿಗೆ 2.20 ಕೋಟಿ ರೂ. ದಂಡ

ನವದೆಹಲಿ: ಳೆದ ಎರಡು ತಿಂಗಳ ಅವಧಿಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಮುಖವಾಗಿ ನಿಯಮ ವನ್ನು ಉಲ್ಲಂಘನೆ ಮಾಡಿದ ಆರೋಪ ದಲ್ಲಿ ಬ್ಯಾಂಕ್‌ಗಳ ಮೇಲೆ ದಂಡವನ್ನು ವಿಧಿಸಲಾಗಿದೆ. ಈಗ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಮೇಲೆ ದಂಡ ವಿಧಿಸಿದೆ.

ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (ಐಒಬಿ) ಮೇಲೆ 2.20 ಕೋಟಿ ರೂಪಾಯಿ ದಂಡ ವಿಧಿಸಿದೆ.

“ಆದಾಯ ಗುರುತಿಸುವಿಕೆ, ಆಸ್ತಿ ವರ್ಗೀಕರಣ ಮತ್ತು ಮುಂಗಡಗಳಿಗೆ ಸಂಬಂಧಿಸಿದ ನಿಯಮಗಳನ್ನು ಬ್ಯಾಂಕ್ ಸರಿಯಾಗಿ ಪಾಲನೆ ಮಾಡಿಲ್ಲ ಎಂದು ಆರ್‌ಬಿಐ ಆರೋಪ ಮಾಡಿದೆ. ಬ್ಯಾಂಕ್ ನಿಯಮ ಉಲ್ಲಂಘನೆ ಮಾಡಿದರ ದಂಡವಾಗಿ ಈ ಹಣವನ್ನು ಪಡೆಯಲಾಗಿದೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಮೇಲೆ ಸುಮಾರು 84.50 ಲಕ್ಷ ರೂಪಾಯಿ ದಂಡ ವಿಧಿಸಿದೆ.

ವಂಚನೆ ಮತ್ತು ವರದಿಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾದ ರೀತಿಯಲ್ಲಿ ಪಾಲನೆ ಮಾಡಿಲ್ಲ ಎಂಬ ಕಾರಣದಿಂದಾಗಿ ಆರ್‌ಬಿಐ ದಂಡವನ್ನು ವಿಧಿಸಿದೆ.

ಕೇಂದ್ರ ಬ್ಯಾಂಕ್‌ನ ಹಲವಾರು ನಿಯಮಗಳನ್ನು ಕೆನರಾ ಬ್ಯಾಂಕ್ ಉಲ್ಲಂಘನೆ ಮಾಡಿದೆ ಎಂದು ಆರ್‌ಬಿಐ ಹೇಳಿದೆ. ಕೆನರಾ ಬ್ಯಾಂಕ್ ಮೇಲೆ 2.92 ಕೋಟಿ ರೂ. ದಂಡವನ್ನು ಆರ್‌ಬಿಐ ವಿಧಿಸಿದೆ.

ಅದಕ್ಕೂ ಮುನ್ನ ಎಚ್‌ಎಸ್‌ಬಿಸಿ ಬ್ಯಾಂಕ್ ಮೇಲೆ 1.73 ಕೋಟಿ ರೂಪಾಯಿ ದಂಡವನ್ನು ವಿಧಿಸಿದೆ.