Sunday, 15th December 2024

ಭಾರತೀಯ ರಾಯಭಾರಿಗೆ ಪಾಕಿಸ್ತಾನ ವಿದೇಶಾಂಗ ಕಚೇರಿಯಿಂದ ಸಮನ್ಸ್

ನವದೆಹಲಿ: ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಯ ಘಟನೆ ಕುರಿತು ಚರ್ಚಿಸಲು ಪಾಕಿಸ್ತಾನ ವಿದೇಶಾಂಗ ಕಚೇರಿ ಶನಿವಾರ ಭಾರತೀಯ ರಾಯಭಾರಿಯನ್ನು ಕರೆಸಿದೆ.

ಪಾಕಿಸ್ತಾನ ಡೈರೆಕ್ಟರ್ ಜನರಲ್ ಇಂಟರ್ ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ಡಿಜಿ-ಐಎಸ್ಪಿಆರ್) ಮೇಜರ್ ಜನರಲ್ ಬಾಬರ್ ಇಫ್ತಿ ಕಾರ್ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ಅವರ ಪತ್ರಿಕಾಗೋಷ್ಠಿಯನ್ನು 11 ಗಂಟೆಗೆ ನಿಗದಿ ಪಡಿಸಲಾಗಿದೆ.

ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಯ ಕದನ ವಿರಾಮ ಉಲ್ಲಂಘನೆ ಮಾಡಿದ್ದಕ್ಕಾಗಿ, ಭಾರತೀಯ ಸೇನೆಯ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಶುಕ್ರವಾರ 11 ಪಾಕಿಸ್ತಾನ ಸೈನಿಕರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಭಾರತೀಯ ಸೇನೆಯ ಮೂಲ ಗಳ ಪ್ರಕಾರ ಎರಡು-ಮೂರು ಪಾಕಿಸ್ತಾನ ಸೇನಾ ವಿಶೇಷ ಸೇವಾ ಗುಂಪು (ಎಸ್‌ಎಸ್‌ಜಿ) ಕಮಾಂಡೋಗಳು ಸಾವನ್ನಪ್ಪಿ ದವರಲ್ಲಿ ಸೇರಿದ್ದಾರೆ.

ನ.13 ರಂದು ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ, ಉರಿ ಪ್ರದೇಶದಿಂದ ಗುರೆಜ್ ವರೆಗಿನ ಅನೇಕ ಸ್ಥಳಗಳಲ್ಲಿ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ನಡೆಸಿತ್ತು.

ಉತ್ತರ ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ ಶುಕ್ರವಾರ ಪಾಕಿಸ್ತಾನ ಸೇನೆಯ ಶಿಬಿರಗಳನ್ನು ಹೊಡೆಯುವ ವೀಡಿಯೊಗಳನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ.