Friday, 8th November 2024

ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್​​​​ ಅವರು ಸೋಮವಾರ ತಮ್ಮ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್​​​​ ನಾಯಕನ ಈ ನಡೆ ಕಾಂಗ್ರೆಸ್​​​ ಪಕ್ಷ ಮುಜುಗರ ಉಂಟು ಮಾಡಿದೆ.

ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಅವರು ತಮ್ಮ ಎಕ್ಸ್​​​ನಲ್ಲಿ ‘ಪಕ್ಷಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.

ಇದೀಗ ಸೂರತ್​​ನಂತೆ ಇಲ್ಲಿಯು ಬಿಜೆಪಿ ಅಭ್ಯರ್ಥಿಯೇ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಡಿಯ ಸೊರೊ ಶಾಸಕ ಪರಶುರಾಮ್ ಧಾಡಾ ಬಿಜೆಪಿಗೆ ಮತ್ತೆ ಬಂದಿದ್ದಾರೆ. ಇದಕ್ಕೂ ಮುನ್ನ ಏ.27 ರಂದು ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯ ಸದಸ್ಯರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಿಖ್ಖರು ಬಿಜೆಪಿಗೆ ಸೇರ್ಪಡೆ ಗೊಂಡಿದ್ದಾರೆ.