Friday, 13th December 2024

ಸೇತುವೆಯಿಂದ ಬಿದ್ದ ಬಸ್‌: 14 ಮಂದಿ ಸಾವು, 20 ಜನರಿಗೆ ಗಾಯ

ಇಂದೋರ್‌: ಮಧ್ಯಪ್ರದೇಶದ ಖಾರ್ಗೋನೆಯಲ್ಲಿ ಬಸ್ಸೊಂದು ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದು 14 ಮಂದಿ ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.

ಅಪಘಾತದ ಸಮಯದಲ್ಲಿ ಬಸ್‌ನಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸು ತ್ತಿದ್ದರು.

ಇಂದೋರ್‌ಗೆ ತೆರಳುತ್ತಿದ್ದಾಗ ಈ ಬಸ್ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಅಪಘಾತ ದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದ ನಂತರ, ಮಧ್ಯಪ್ರದೇಶ ಸರ್ಕಾರವು ಮೃತರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ತೀವ್ರವಾಗಿ ಗಾಯಗೊಂಡವರಿಗೆ ವೈದ್ಯಕೀಯ ನೆರವು ನೀಡಲು ರಾಜ್ಯ ಸರ್ಕಾರ 50,000 ರೂ. ಹಾಗೂ ಗಾಯಗೊಂಡವರಿಗೆ 25,000 ರೂ. ಘೋಷಿಸಿದೆ.