Friday, 2nd June 2023

ಮೆಟ್ಟಿಲುಬಾವಿಯ ಮೇಲ್ಛಾವಣಿ ಕುಸಿತ ದುರಂತ: ಸಾವಿನ ಸಂಖ್ಯೆ 35ಕ್ಕೆ ಏರಿಕೆ

ಇಂದೋರ್: ಮಧ್ಯಪ್ರದೇಶದ ಇಂದೋರ್‌ನ ದೇವಸ್ಥಾನವೊಂದರಲ್ಲಿ ರಾಮನವಮಿಯ ವೇಳೆ ಮೆಟ್ಟಿಲು ಬಾವಿಯ ಮೇಲ್ಛಾವಣಿ ಕುಸಿದ ಪರಿಣಾಮ ಮೃತಪಟ್ಟವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ.

ಜನಸಂದಣಿಯ ಭಾರ ತಡೆಯಲಾಗದೆ ಬೆಳೇಶ್ವರ ಮಹಾದೇವ ದೇವಾಲಯದ ಮೆಟ್ಟಿಲುಬಾವಿಯ ಛಾವಣಿ ಕುಸಿದುಬಿದ್ದಿತ್ತು.

“ಒಟ್ಟು 35 ಜನರು ಸಾವನ್ನಪ್ಪಿದ್ದಾರೆ, ಒಬ್ಬರು ನಾಪತ್ತೆಯಾಗಿದ್ದಾರೆ ಹಾಗೂ 14 ಜನರನ್ನು ರಕ್ಷಿಸಲಾಗಿದೆ. ಇಬ್ಬರು ಚಿಕಿತ್ಸೆ ಪಡೆದ ನಂತರ ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ. ಕಾಣೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಇಂದೋರ್ ಕಲೆಕ್ಟರ್ ಇಳಯರಾಜ ಟಿ. ಹೇಳಿದ್ದಾರೆ.

 

error: Content is protected !!