Wednesday, 11th December 2024

ಒಳನುಸುಳುವಿಕೆ ಪ್ರಯತ್ನ ವಿಫಲ: ಓರ್ವ ಭಯೋತ್ಪಾದಕ ಹತ

 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ಗುರುವಾರ ನಸುಕಿನ ಜಾವ ವಿಫಲಗೊಳಿಸಿದ್ದು ಗುಂಡಿನ ದಾಳಿಯಲ್ಲಿ ಓರ್ವ ಭಯೋತ್ಪಾದಕ ಹತನಾಗಿದ್ದಾನೆ.
ಕುಪ್ವಾರ ಪೊಲೀಸರ ನಿಖರ ಮಾಹಿತಿಯೊಂದಿಗೆ ಸೈನ್ಯ ಮತ್ತು ಪೊಲೀಸ್ ಇಲಾಖೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸೈದ್ಪೋರಾ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರ ಒಳನುಸುಳುವಿಕೆಯನ್ನು ತಡೆಯಲಾಯಿತು. ಕಾರ್ಯಾಚರಣೆಯಲ್ಲಿ ಓರ್ವ ನುಸುಳುಕೋರನನ್ನು ಹತ್ಯೆಗೈಯಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.