Sunday, 15th December 2024

‘ಓಮಿಕ್ರಾನ್’ ತಳಿ ತಲ್ಲಣ: ವಿಮಾನಗಳ ಪುನರಾರಂಭ ಮುಂದೂಡಿಕೆ

ನವದೆಹಲಿ: ಹೊಸ ಕೋವಿಡ್ ರೂಪಾಂತರಿ ‘ಓಮಿಕ್ರಾನ್’ ತಳಿ ತಲ್ಲಣ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ಡಿ.15 ರಿಂದ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳ ಪುನರಾರಂಭ ಮುಂದೂ ಡಲು ನಾಗರಿಕ ವಿಮಾನಯಾನ ನಿರ್ದೇಶನಾಲಯ ನಿರ್ಧರಿಸಿದೆ.

ಜಾಗತಿಕ ಸನ್ನಿವೇಶದ ದೃಷ್ಟಿಯಿಂದ, ನಿಗದಿತ ವಾಣಿಜ್ಯ ಅಂತಾರಾಷ್ಟ್ರೀಯ ಪ್ರಯಾಣಿಕರ ಸೇವೆಗಳ ಪುನರಾರಂಭದ ದಿನಾಂಕವನ್ನು ಮುಂದೂಡಲಾಗಿದೆ ಎಂದು ಡಿಜಿಸಿಎ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ದೇಶದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ತಿಂಗಳು, ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳನ್ನು ಸಾಮಾನ್ಯಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿತು.

ಸಾಂಕ್ರಾಮಿಕ ರೋಗದ ನಂತರ ಮಾರ್ಚ್ 2020ರಿಂದ ಭಾರತಕ್ಕೆ ಮತ್ತು ಭಾರತದಿಂದ ನಿಗದಿತ ಅಂತಾರಾಷ್ಟ್ರೀಯ ವಿಮಾನ ಗಳನ್ನು ಸ್ಥಗಿತಗೊಳಿಸಿತ್ತು.