Saturday, 14th December 2024

‘ಐಸಿಸ್’ ಸಂಚು ಪ್ರಕರಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ NIA ದಾಳಿ

ಬೆಂಗಳೂರು/ಮುಂಬೈ: ದೇಶಾದ್ಯಂತ ಭಯೋತ್ಪಾದಕ ಕೃತ್ಯ ನಡೆಸಲು ಜಾಗತಿಕ ಭಯೋತ್ಪಾದಕ ಗುಂಪು ‘ಐಸಿಸ್’ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕರ್ನಾಟಕ ಮತ್ತು ಮಹಾರಾಷ್ಟ್ರದ 44ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ.

ಪುಣೆ ದಾಳಿ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.

ಎನ್‌ಐಎ ದಾಳಿ ನಡೆಸುತ್ತಿರುವ ಒಟ್ಟು ಸ್ಥಳಗಳ ಪೈಕಿ ಕರ್ನಾಟಕದಲ್ಲಿ ಒಂದು ಸ್ಥಳ, ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ ಒಂದು ಸ್ಥಳವನ್ನು ಅಧಿಕಾರಿಗಳು ಶೋಧಿಸುತ್ತಿದ್ದಾರೆ. ಭಾರತದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರ ಹರಡುವ ಭಯೋತ್ಪಾದಕ ಸಂಘಟನೆಯ ಯೋಜನೆಗಳನ್ನು ವಿಫಲಗೊಳಿಸಲು ಎನ್‌ಐಎ ವ್ಯಾಪಕ ತನಿಖೆ ನಡೆಸುತ್ತಿದೆ.