ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ಭೀತಿಯ ಮಧ್ಯೆ ಏರ್ ಇಂಡಿಯಾ ಟೆಲ್ ಅವಿವ್ಗೆ ತೆರಳುವ ವಿಮಾನಗಳನ್ನು ಸ್ಥಗಿತಗೊಳಿಸಿದೆ. ಈ ಹಿಂದೆ ಲೆಬನಾನ್ನಲ್ಲಿರುವ ಭಾರತೀಯರಿಗೆ ತಕ್ಷಣವೇ ತೊರೆಯುವಂತೆ ಭಾರತ ಸರ್ಕಾರ ಸಲಹೆ ನೀಡಿತ್ತು.
ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಅವರ ಹತ್ಯೆಯ ನಂತರ ಇಸ್ರೇಲ್ ಮತ್ತು ಹಮಾಸ್ ನಡುವಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ.
ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ನಾವು ಟೆಲ್ ಅವಿವ್ಗೆ ತೆರಳುವ ಮತ್ತು ಅಲ್ಲಿಂದ ಬರುವ ನಮ್ಮ ನಿಗದಿತ ವಿಮಾನಗಳ ಕಾರ್ಯಾಚರಣೆಯನ್ನು 2024 ಆಗಸ್ಟ್ 8ರವರೆಗೆ ಸ್ಥಗಿತಗೊಳಿಸಿದ್ದೇವೆ ಎಂದು ಏರ್ ಇಂಡಿಯಾ ತಿಳಿಸಿದೆ.
ಏರ್ ಇಂಡಿಯಾವು ಆಗಸ್ಟ್ 1ರಂದು ದೆಹಲಿಯಿಂದ ಟೆಲ್ ಅವಿವ್ಗಿದ್ದ ವಿಮಾನ AI139 ಮತ್ತು ಟೆಲ್ ಅವಿವ್ನಿಂದ ದೆಹಲಿಗಿದ್ದ AI140 ವಿಮಾನ ಹಾರಾಟವನ್ನು ರದ್ದುಗೊಳಿಸಿದೆ. ಈ ಎರಡು ವಿಮಾನಗಳಲ್ಲಿ ಪ್ರಯಾಣಿಸಲು ಬುಕಿಂಗ್ ಹೊಂದಿದ್ದ ಪ್ರಯಾಣಿಕರಿಗೆ ಮರುಹೊಂದಿಸಿವಿಕೆ ಮತ್ತು ರದ್ದತಿ ಶುಲ್ಕಗಳನ್ನು ಒಂದು ಬಾರಿ ಮನ್ನಾ ಮಾಡಲಾಗುವುದು. ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇವೆ ಎಂದು ಏರ್ಲೈನ್ಸ್ ತಿಳಿಸಿದೆ.